ನವದೆಹಲಿ: ದೇಶ 76ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿದೆ. ಪ್ರಧಾನಿ ನರೇಂದ್ರ ಮೋದಿ ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿ ಭಾಷಣ ಮಾಡಲಿದ್ದಾರೆ. ಆದರೆ ಭಾರತದ ಸಂಭ್ರಮಕ್ಕೆ ಕೊಳ್ಳಿ ಇಡಲು ಶತ್ರು ರಾಷ್ಟ್ರ ಪಾಕಿಸ್ತಾನ ಸಜ್ಜಾಗಿದ್ದು, ಪಾಕ್ ಭಯೋತ್ಪಾದಕ ಸಂಟನೆಗಳು ಸ್ವಾತಂತ್ರ್ಯ ದಿನಾಚರಣೆ ದಿನ ದಾಳಿ ಮಾಡಲು ಸಂಚು ರೂಪಿಸಿದೆ. ಭಯೋತ್ಪಾದಕ ಸಂಘಟನೆಗಳಾದ ಲಷ್ಕರ್ ಇ ತೊಬ್ಯಾ, ಜೈಶ್ ಇ ಮೊಹಮ್ಮದ್ ಸಂಘಟನೆಗಳು ದಾಳಿಗೆ ಸಜ್ಜಾಗಿವೆ ಎಂಬ ಮಾಹಿತಿಯನ್ನು ಭಾರತದ ಗುಪ್ತಚರ ಇಲಾಖೆ ಭದ್ರತಾ ಪಡೆಗಳಿಗೆ ರವಾನಿಸಿದೆ. ಇದರ ಬೆನ್ನಲ್ಲೇ ದೇಶದ ಹಲವೆಡೆ ಹೈಅಲರ್ಟ್ ಘೋಷಿಸಲಾಗಿದೆ.

ದೆಹಲಿಯನ್ನು ಪ್ರಮುಖ ಟಾರ್ಗೆಟ್ ಮಾಡಿರುವ ಉಗ್ರರು ಸ್ವಾತಂತ್ರ್ಯ ದಿನಾಚರಣೆಯಂದೇ ದಾಳಿಗೆ ಸಜ್ಜಾಗಿದ್ದಾರೆ. ಪಾಕಿಸ್ತಾನ ಉಗ್ರ ಸಂಘಟನೆ ದಾಳಿ ಜೊತೆಗೆ ಭಾರತದೊಳಗೆ ಸಂಘರ್ಷ ಸೃಷ್ಟಿಸಿ ಹಿಂಸಾಚಾರ ನಡೆಸುವ ಸಾಧ್ಯತೆಯಿದೆ ಎಂದು ಗುಪ್ತಚರ ಸಂಸ್ಥೆ ಮಾಹಿತಿ ನೀಡಿದೆ. ಅಲ್ಲದೆ ಫೆಬ್ರವರಿ ತಿಂಗಳಲ್ಲೇ ಭಾರತದ ಸ್ವಾತಂತ್ರ್ಯ ದಿನಾಚರಣೆ ಮೇಲಿನ ದಾಳಿಗೆ ಪಾಕಿಸ್ತಾನ ಉಗ್ರ ಸಂಘಟನೆಗಳು ಸಜ್ಜಾಗಿರುವ ಆತಂಕಕಾರಿ ಮಾಹಿತಿಯನ್ನು ಗುಪ್ತಚರ ಇಲಾಖೆ ಸಂಗ್ರಹಿಸಿದೆ. ಕೆಂಪುಕೋಟೆ ಸುತ್ತಮುತ್ತ ಭಾರಿ ಭದ್ರತೆ ಇರುವ ಕಾರಣ ದೆಹಲಿಯ ಸಾರ್ವಜನಿಕ ಪ್ರದೇಶದ ಮೇಲೆ ದಾಳಿ ನಡೆಸಲು ಉಗ್ರರು ಸಂಚು ರೂಪಿಸಿದ್ದಾರೆ.

ಭಾರತದೊಳಗೆ ಭಯೋತ್ಪಾದಕ ಹಾಗೂ ವಿದ್ವಂಸಕ ಕೃತ್ಯದ ಕುರಿತು ತನಿಖೆ ನಡೆಸುತ್ತಿರುವ ಎನ್ಐಎ ಕೂಡ ದಾಳಿ ಸೂಚನೆ ನೀಡಿದೆ. ಭಾರತದಲ್ಲಿ ಹಲವು ಉಗ್ರ ಸಂಘಟೆಗಳು ರಹಸ್ಯವಾಗಿ ಕಾರ್ಯನಿರ್ವಹಿಸುತ್ತಿದೆ. ಈ ಉಗ್ರರು ರೈಲು ನಿಲ್ದಾಣ ಸೇರಿದಂತೆ ಹಲುವ ಸಾರ್ವಜನಿಕ ಪ್ರದೇಶದ ಮೇಲೆ ದಾಳಿ ನಡೆಸಿ ದೇಶದಲ್ಲಿ ಭಯದ ವಾತಾವರಣ ಸೃಷ್ಟಿಸಲು ಸಂಚು ರೂಪಿಸಿದೆ ಎಂದು ಹೇಳಿದೆ.

ಗುಪ್ತಚರ ಮಾಹಿತಿಯಿಂದ ಆಗಸ್ಟ್ ತಿಂಗಳ ಆರಂಭದಿAದಲೇ ಭದ್ರತೆ ಹೆಚ್ಚಿಸಲಾಗಿದೆ. ಜಮ್ಮು ಮತ್ತು ಕಾಶ್ಮೀರ ಗಡಿ ಬಾಗದಲ್ಲಿ ಉಗ್ರರ ನುಸುಳುವಿಕೆ ಪ್ರಯತ್ನಗಳನ್ನು ವಿಫಲಗೊಳಿಸಲಾಗಿದೆ. ಗಡಿಯುದ್ದಕ್ಕೂ ಕಟ್ಟೆಚ್ಚರ ವಹಿಸಲಾಗಿದೆ. ಇನ್ನು ದೆಹಲಿ ಸೇರಿದಂತೆ ದೇಶದ ಪ್ರಮುಖ ನಗರಗಳು, ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ.

