Share this news

ಮೂಡುಬಿದಿರೆ: ತಾಲೂಕಿನ ಪಾಲಡ್ಕ ಗ್ರಾಮ ಪಂಚಾಯತ್ ನಲ್ಲಿ ಇಂದು 77ನೇ ಸ್ವಾತಂತ್ರೋತ್ಸವದ ಅಂಗವಾಗಿ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಕೆ ಧ್ವಜಾರೋಹಣ ನೆರವೇರಿಸಿದರು.

ಧ್ವಜಾರೋಹಣದ ಬಳಿಕ ನಿವೃತ್ತ ಯೋಧ ಉದಯಭಾನು ಭಟ್ ಕಡಂದಲೆ ಅವರನ್ನು ಸನ್ಮಾನಿಸಲಾಯಿತು.

ಬಳಿಕ ಪಂಚಾಯತ್ ನ ಸ್ವಚ್ಛ ಸಂಕೀರ್ಣ ಘಟಕದ ಆವರಣದಲ್ಲಿ ವನಮಹೋತ್ಸವ ನಡೆಸಲಾಯಿತು.

ಈ ಸಂದರ್ಭದಲ್ಲಿ ಉಪಾಧ್ಯಕ್ಷ ಸುಖೇಶ್ ಶೆಟ್ಟಿ, ಪಂಚಾಯತ್ ಸದಸ್ಯರು, ಕೆ. ಎಂ. ಎಫ್ ನ ಅಧ್ಯಕ್ಷ ಕೆ. ಪಿ. ಸುಚರಿತ ಶೆಟ್ಟಿ, ಪಂಚಾಯತ್ ನ ಮಾಜಿ ಸದಸ್ಯ ಸುಕೇಶ್ ಶೆಡ್ಯ, ಪಿಡಿಒ, ರಕ್ಷಿತಾ ಡಿ ,ದ್ವಿತೀಯ ದರ್ಜೆ ಲೆಕ್ಕ ಸಹಾಯಕರು, ಸಿಬ್ಬಂದಿ ವರ್ಗದವರು, ಆಶಾ ಕಾರ್ಯಕರ್ತೆಯರು, ಸಂಜೀವಿನಿ ಒಕ್ಕೂಟದ ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

 

Leave a Reply

Your email address will not be published. Required fields are marked *