Share this news

ಉಡುಪಿ: ಉಡುಪಿ ನೇತ್ರಜ್ಯೋತಿ ಪ್ಯಾರಾಮೆಡಿಕಲ್ ಕಾಲೇಜಿನಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬAಧಪಟ್ಟAತೆ ಸಿಐಡಿ ತಂಡದ ಮೊದಲನೇ ಹಂತದ ತನಿಖೆ ಮುಗಿದಿದೆ. ಕಳೆದ ಒಂದು ವಾರದಿಂದ ಉಡುಪಿಯಲ್ಲಿ ಬೀಡು ಬಿಟ್ಟಿದ್ದ ಸಿಐಡಿ ತಂಡ ಪ್ರಕರಣಕ್ಕೆ ಸಂಬAಧಪಟ್ಟ ಅಗತ್ಯ ಮಾಹಿತಿಗಳನ್ನು ಸಂಗ್ರಹಿಸಿ ಬೆಂಗಳೂರಿಗೆ ತೆರಳಿದೆ.

ಈ ಮೊದಲು ಮಲ್ಪೆ ಪೊಲೀಸ್ ಠಾಣೆಯಲ್ಲಿ ಸುಮೋಟೋ ಕೇಸ್ ದಾಖಲಿಸಿಕೊಂಡಿದ್ದ ಪೊಲೀಸರು ತನಿಖೆ ಆರಂಭಿಸಿದ್ದರು. ಪೊಲೀಸ್ ತನಿಖೆ ವಿಚಾರವಾಗಿ ಒಂದಿಷ್ಟು ಅಪಸ್ವರಗಳು ಬಂದ ಹಿನ್ನೆಲೆಯಲ್ಲಿ ತನಿಖಾಧಿಕಾರಿಗಳನ್ನು ಬದಲಾಯಿಸಲಾಗಿತ್ತು. ಆದರೂ ಪೊಲೀಸ್ ತನಿಖೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಹಿಂದೂ ಸಂಘಟನೆ ಮತ್ತು ಬಿಜೆಪಿ ಮುಖಂಡರುಗಳು ವಿಶೇಷ ಎಸ್‌ಐಟಿ ತಂಡ ರಚಿಸಿ ತನಿಖೆ ಕೈಗೆತ್ತಿಕೊಳ್ಳುವಂತೆ ಮನವಿ ಮಾಡಿತ್ತು. ಆದರೆ ರಾಜ್ಯ ಸರ್ಕಾರ ಸಿಐಡಿ ಗೆ ಪ್ರಕರಣವನ್ನ ಹಸ್ತಾಂತರಿಸಿದ್ದು ಸದ್ಯ ತನಿಖೆ ಪ್ರಗತಿಯಲ್ಲಿದೆ.

ಕಾಲೇಜಿನ ಆಡಳಿತ ಮಂಡಳಿ ಜೊತೆ ಮಾತುಕತೆ ನಡೆಸಿರುವ ಸಿಐಡಿ ತಂಡ ಸಂತ್ರಸ್ತೆ ಮತ್ತು ಮೂವರು ಅರೋಪಿಯನ್ನು ಭೇಟಿಯಾಗಿ ವಿಚಾರಣೆ ನಡೆಸಿದೆ. ಅಲ್ಲದೆ ಸರ್ಚ್ ವಾರೆಂಟ್ ಪಡೆದು ಆಪಾದಿತರ ಮನೆಯನ್ನು ಸರ್ಚ್ ಮಾಡಿದ್ದ ಸಿಐಡಿ ತಂಡ ಪ್ರಕರಣಕ್ಕೆ ಸಂಬAಧಪಟ್ಟ ಪ್ರತಿಯೊಂದು ಅಂಕಿ ಅಂಶಗಳನ್ನ ಮತ್ತು ಘಟನಾವಳಿಗಳನ್ನ ಕೂಲಂಕುಶವಾಗಿ ಪರಿಶೀಲನೆ ನಡೆಸಿದೆ. ಸಿಐಡಿ ಎಡಿಜಿಪಿ ಮನೀಶ್ ಕರ್ಬಿಕರ್ ಮತ್ತು ಎಸ್ ಪಿ ರಾಘವೇಂದ್ರ ಹೆಗಡೆ ಅವರ ನೇತೃತ್ವದಲ್ಲಿ ತನಿಖಾದಿಕಾರಿ ಡಿವೈಎಸ್ಪಿ ಅಂಜುಮಾಲ ಅವರು ಒಂದು ವಾರದಿಂದ ಉಡುಪಿಯಲ್ಲಿ ಇದ್ದು ಪ್ರಕರಣದ ಸಂಪೂರ್ಣ ತನಿಖೆ ನಡೆಸಿ ಸದ್ಯ ಬೆಂಗಳೂರಿಗೆ ತೆರಳಿದ್ದಾರೆ.

ಆರೋಪಿಗಳಿಂದ ವಶಕ್ಕೆ ಪಡೆಯಲಾಗಿದ್ದ ಮೊಬೈಲ್ ನ ಎಫ್‌ಎಸ್‌ಎಲ್ ವರದಿಗಾಗಿ ಸಿಐಡಿ ತನಿಖಾ ತಂಡ ಕಾಯುತ್ತಿದೆ. ವಿದ್ಯಾರ್ಥಿನಿಯರಿಂದ ಪಡೆಯಲಾಗಿದ್ದ ಮೂರು ಮೊಬೈಲ್‌ಗಳ ಎಫ್‌ಎಸ್‌ಎಲ್ ವರದಿ ಬಂದ ತಕ್ಷಣ ಪ್ರಕರಣದ ಸತ್ಯತೆ ಹೊರಗೆ ಬೀಳುವ ಸಾಧ್ಯತೆ ದಟ್ಟವಾಗಿದೆ.

Leave a Reply

Your email address will not be published. Required fields are marked *