ಪುಣೆ: ಭಾರತ ಹಳ್ಳಿ ಹಳ್ಳಿಗಳಲ್ಲೂ 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿAದ ಆಚರಿಸಲಾಗಿದೆ. ಸಂಭ್ರಮ, ಸಡಗರ, ಸಾಂಸ್ಕೃತಿಕ ಕಾರ್ಯಕ್ರಮ, ಮೆರವಣಿ,ತಿರಂಗ ಯಾತ್ರೆ ಸೇರಿದಂತೆ ಹಲವು ಕಾರ್ಯಕ್ರಮಗಳು ನಡೆದಿದೆ. ಆದರೆ ಇದರ ನಡುವೆ ಕೆಲ ಕಿಡಿಗೇಡಿಗಳು ಸ್ವಾತಂತ್ರ್ಯ ದಿನಾಚರಣೆಗೆ ಧಕ್ಕೆ ತರುವ ಪ್ರಯತ್ನ ಮಾಡಿದ್ದಾರೆ. ಸ್ವಾತಂತ್ರ್ಯ ದಿನಾಚರಣೆಯಂದು ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ್ದಾರೆ. ಪುಣೆಯಲ್ಲಿ ಈ ಘಟನೆ ನಡೆದಿದ್ದು, ದೇಶ ವಿರೋಧಿ ಕೃತ್ಯ ಸಂಬAಧ ಇಬ್ಬರನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
ಪುಣೆಯ ಲಕ್ಷ್ಮೀ ನಗರದಲ್ಲಿ ನಿರ್ಮಾಣ ಹಂತದಲ್ಲಿರುವ ಶಾಲಾ ಕಟ್ಟದಿಂದ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೇಳಿಬಂದಿದೆ. ಹಲವು ಯುವಕರು ಸೇರಿ ಪಾಕಿಸ್ತಾನ ಧ್ವಜಾರೋಹಣ ಮಾಡಿ, ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ್ದಾರೆ. ಈ ಕುರಿತು ಸ್ಥಳೀಯರು ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದರು. ಮಾಹಿತಿ ಪಡೆದು ಸ್ಥಳಕ್ಕೆ ಪೊಲೀಸರು ಆಗಮಿಸುವ ವೇಳೆಯೂ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಮೊಳಗಿದೆ. ಹೀಗಾಗಿ ನೇರವಾಗಿ ದಾಳಿ ಮಾಡಿದ ಪೊಲೀಸರ ತಂಡ ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತರನ್ನು ಅಕ್ಬರ್ ನದಾಫ್ ಹಾಗೂ ತೌಖಿರ್ ಎಂದು ಗುರುತಿಸಲಾಗಿದೆ. ತೌಖೀರ್ ಅದೇ ಶಾಲಾ ಕಟ್ಟದಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ. ಇನ್ನೋರ್ವ ಅಕ್ಬರ್ ನದಾಫ್ ಕೊಂಧ್ವಾದಲ್ಲಿನ ಬೇಕರಿಯೊಂದರಲ್ಲಿ ಕೆಲಸ ಮಾಡುತ್ತಿದ್ದ.
ಇಬ್ಬರನ್ನು ಬಂಧಿಸಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಇವರ ಮೊಬೈಲ್ ವಶಪಡಿಸಿಕೊಂಡು ಪರಿಶೀಲನೆ ನಡೆಸಿದ್ದಾರೆ. ಭಾರತ ವಿರೋಧಿ ಪೋಸ್ಟ್ಗಳು ಸೇರಿದಂತೆ ಹಲವು ಮಾಹಿತಿಗಳನ್ನು ಪೊಲೀಸರು ಬಂಧಿತ ಆರೋಪಿಗಳ ಮೊಬೈಲ್ನಿಂದ ಪಡೆದಿದ್ದಾರೆ. ಇದೇ ರೀತಿ ಪುಣೆಯ ಕೆಲ ಭಾಗದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿರುವ ಸಾಧ್ಯತೆ ಇದೆ ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.





