Share this news

ನವದೆಹಲಿ: ಹಿಂದೂ ಧರ್ಮ ಇಸ್ಲಾಂಗಿAತ ಹಳೆಯದು, ಮೊದಲು ಮುಸ್ಲಿಮರು ಹಿಂದೂಗಳಾಗಿದ್ದರು ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ಸಿಎಂ ಗುಲಾಂ ನಬಿ ಆಜಾದ್ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಇಸ್ಲಾಂ ಹುಟ್ಟಿದ್ದು 1500 ವರ್ಷಗಳ ಹಿಂದೆ, ಭಾರತದ ಯಾರೂ ಹೊರಗಿನವರಲ್ಲ, ನಾವೆಲ್ಲರೂ ಈ ದೇಶಕ್ಕೆ ಸೇರಿದವರು, ಭಾರತದ ಮುಸ್ಲಿಮರು ಮೂಲತಃ ಹಿಂದೂಗಳು, ನಂತರ ಇಸ್ಲಾಂ ಧರ್ಮಕ್ಕೆ ಮತಾಂತರಗೊAಡರು ಎಂದಿದ್ದಾರೆ.600 ವರ್ಷಗಳ ಹಿಂದೆ ಕಾಶ್ಮೀರದಲ್ಲಿ ಕಾಶ್ಮೀರಿ ಪಂಡಿತರು ಮಾತ್ರ ಇದ್ದರು ಎಂದು ಹೇಳುತ್ತಾರೆ, ನಂತರ ಜನರು ಮತಾಂತರಗೊAಡು ಮುಸ್ಲಿಮರಾದರು. ಜನರು ಸಹೋದರತೆ, ಶಾಂತಿ, ಐಕ್ಯತೆಯನ್ನು ಕಾಪಾಡುವಂತೆ ಮನವಿ ಮಾಡಿದ ಆಜಾದ್, ರಾಜಕೀಯದೊಂದಿಗೆ ಧರ್ಮವನ್ನು ಬೆರೆಸಬಾರದು, ಜನರು ಧರ್ಮದ ಹೆಸರಿನಲ್ಲಿ ಮತ ಹಾಕಬಾರದು ಎಂದು ಹೇಳಿದರು.

ಭಾರತೀಯ ಮುಸ್ಲಿಮರ ಕುರಿತಂತೆ ಮಾತನಾಡಿದ ಆಜಾದ್, ಹಿಂದೂ-ಮುಸ್ಲಿA ಎನ್ನುವ ಬೇಧಭಾವವೇಕೆ, ಹಿಂದೂಗಳAತೆಯೇ ಮುಸ್ಲಿಮರು ಕೂಡ ಮಣ್ಣಾಗಿ ಹೋಗುತ್ತಾರೆ, ಅವರ ದೇಹ ಹಾಗೂ ಎಲುಬುಗಳು ಕೂಡ ಭಾರತ ಮಾತೆಯ ಭಾಗವಾಗುತ್ತದೆ, ಹಾಗಿದ್ದಾಗ ಹಿಂದೂ-ಮುಸ್ಲಿA ಎನ್ನುವ ಭಾವನೆ ಏಕೆ ಎಂದು ಪ್ರಶ್ನಿಸಿದರು.ಕಳೆದ ವರ್ಷವಷ್ಟೇ ಗುಲಾಂ ನಬಿ ಆಜಾದ್ ಕಾಂಗ್ರೆಸ್ ತೊರೆದು ತಮ್ಮದೇ ಆದ ಹೊಸ ಪಕ್ಷವನ್ನು ಕಟ್ಟಿದ್ದರು, ಇದೀಗ ಅವರ ಈ ಹೇಳಿಕೆ ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಮೂಡಿಸಿದೆ.

Leave a Reply

Your email address will not be published. Required fields are marked *