ಮಂಗಳೂರು :ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಗೋದಾಮಿನಲ್ಲಿದ್ದ ಕೋಟ್ಯಾಂತರ ಮೌಲ್ಯದ ಪಡಿತರ ಅಕ್ಕಿ ನಾಪತ್ತೆಯಾಗಿದೆ.
ಒಂದೆಡೆ ಸರಕಾರ ಪಡಿತರ ಅಕ್ಕಿಯನ್ನು ವಿತರಿಸುವ ಕುರಿತು ತಲೆ ಕೆಡಿಸಿಕೊಂಡಿದ್ದರೆ ಮತ್ತೊಂದೆಡೆ ಗೋಡೌನ್ ನಿಂದ ಫಲಾನುಭವಿಗಳಿಗೆ ಸೇರಬೇಕಾಗಿರುವ ಅಕ್ಕಿ ಎಲ್ಲೋ ನಾಪತ್ತೆಯಾಗಿದೆ. ನ್ಯಾಯಬೆಲೆ ಅಂಗಡಿ ಸೊಸೈಟಿಗಳ ಮೂಲಕ ಅರ್ಹರಿಗೆ ವಿತರಣೆ ಆಗಬೇಕಿದ್ದ ಪಡಿತರ ಅಕ್ಕಿ ದಾಸ್ತಾನು ಮಳಿಗೆಯಲ್ಲಿ ಸುಮಾರು 1.32 ಕೋಟಿ ರೂ ಮೌಲ್ಯದ ಅಕ್ಕಿ ನಾಪತ್ತೆಯಾಗಿರುವುದು ಗೋಡೌನ್ ನಿಂದ ಪಡಿತರ ಅಕ್ಕಿ ಗೋಣಿಗಳ ಲೆಕ್ಕ ಮಾಡಿದಾಗ ಬೆಳಕಿಗೆ ಬಂದಿದೆ.

ವಿಷಯವನ್ನು ಗಂಭೀರವಾಗಿ ಪರಿಗಣಿಸಿರುವ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಈ ಕುರಿತು ಸಮಗ್ರ ತನಿಖೆಗೆ ಒತ್ತಾಯಿಸಿದ್ದಾರೆ.ಜಿಲ್ಲೆಯ ಉನ್ನತ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು ಪರಿಶೀಲ ನಡೆಸಿದ್ದಾರೆ. ಸದ್ಯಕ್ಕೆ ಗೋದೌನ್ ನೋಡಿಕೊಳ್ಳುತ್ತಿದ್ದ ವ್ಯಕ್ತಿಯನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಬಂಟ್ವಾಳ ತಾಲೂಕು ಕಳ್ಳಿಗೆ ಗ್ರಾಮದ ಕೆಎಸ್ಆರ್ಟಿಸಿ ಡಿಪೋ ಎದುರಿರುವ ಸಗಟು ಗೋದಾಮಿಯಿಂದ ಬಂಟ್ವಾಳ ನಗರಕ್ಕೆ ಪಡಿತರ ಅಕ್ಕಿ ಸರಬರಾಜಾಗುತ್ತದೆ. ಪಡಿತರ ವಿತರಣೆಯು ವಿಳಂಬವಾಗುತ್ತಿರುವ ಬಗ್ಗೆ ಅನುಮಾನ ಬಂದು ಜಿಲ್ಲಾ ವ್ಯವಸ್ಥಾಪಕರ ಮೌಖಿಕ ಆದೇಶದ ಮೇಲೆ ಆಗಸ್ಟ್ 17ರಂದು ಬಂಟ್ವಾಳದ ಸಗಟು ಮಳಿಗೆಗೆ ಬಂದು ದಾಸ್ತಾನು ಪರಿಶೀಲಿಸಿದಾಗ, ಫಿಸ್ಟ್ ತಂತ್ರಾಂಶದ ಪ್ರಕಾರ ಸಗಟು ಮಳಿಗೆಯಲ್ಲಿ ಇರಬೇಕಾಗಿದ್ದ ಭೌತಿಕ ದಾಸ್ತಾನುವಿಗಿಂತ ಅಂದಾಜು 1,32,36,030 ರೂ ಮೌಲ್ಯದ 3892 ಕ್ವಿಂಟಾಲ್ ಅಕ್ಕಿ ಕೊರತೆ ಇರುವುದು ಕಂಡು ಬಂದಿದೆ.

ಪಡಿತರ ವಿತರಣೆಯು ವಿಳಂಬವಾಗುತ್ತಿರುವ ಬಗ್ಗೆ ಅನುಮಾನ ಬಂದು ಜಿಲ್ಲಾ ವ್ಯವಸ್ಥಾಪಕರ ಮೌಖಿಕ ಆದೇಶದ ಮೇಲೆ ಆಗಸ್ಟ್ 17ರಂದು ಬಂಟ್ವಾಳದ ಸಗಟು ಮಳಿಗೆಗೆ ಬಂದು ದಾಸ್ತಾನು ಪರಿಶೀಲಿಸಿದಾಗ, ಫಿಸ್ಟ್ ತಂತ್ರಾಂಶದ ಪ್ರಕಾರ ಸಗಟು ಮಳಿಗೆಯಲ್ಲಿ ಇರಬೇಕಾಗಿದ್ದ ಭೌತಿಕ ದಾಸ್ತಾನುವಿಗಿಂತ ಅಂದಾಜು 1,32,36,030 ರೂ ಮೌಲ್ಯದ 3892 ಕ್ವಿಂಟಾಲ್ ಅಕ್ಕಿ ಕೊರತೆ ಇರುವುದು ಕಂಡು ಬಂದಿದೆ.




