ಬೆಂಗಳೂರು: ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ 5 ಗ್ಯಾರಂಟಿ ಯೋಜನೆಗಳಿಗೆ ಹಣಕಾಸು ಹೊಂದಿಸುವಲ್ಲಿ ಒದ್ದಾಟ ನಡೆಸುತ್ತಿರುವ ಸಿಎಂ ಸಿದ್ದರಾಮಯ್ಯರಿಗೆ ತನ್ನದೇ ಪಕ್ಷದ ಶಾಸಕರು ಕ್ಷೇತ್ರದ ಅಭಿವೃದ್ದಿಗಾಗಿ ಅನುದಾನ ಸಿಗುತ್ತಿಲ್ಲವೆಂದು ಬಹಿರಂಗವಾಗಿ ಅಸಾಮಾಧಾನ ಹೊರಹಾಕಿದ್ದರು. ಇದೀಗ ಸಿಎಂ ಶಾಸಕರ ಅಸಮಾಧಾನ ಶಮನಕ್ಕೆ ಮುಲಾಮ ಹಚ್ಚುವಪ್ರಯತ್ನಕ್ಕೆ ಕೈಹಾಕಿದ್ದಾರೆ.
ಪ್ರದೇಶಭಿವೃದ್ಧಿ ಮಂಡಳಿ ಯೋಜನೆಯಡಿಯಲ್ಲಿ ಸಿಎಂ ಸಿದ್ದರಾಮಯ್ಯ ಮೊದಲ ಕಂತಿನಲ್ಲಿ 145 ಕೋಟಿ ರೂ ಬಿಡುಗಡೆ ಮಾಡಿದ್ದು, ಈ ಯೋಜನೆಯಡಿ ಪ್ರತೀ ಶಾಸಕರ ಕ್ಷೇತ್ರಕ್ಕೆ 50 ಲಕ್ಷ ಅನುದಾನ ಹಂಚಿಕೆಯಾಗಲಿದೆ. 224 ಕ್ಷೇತ್ರದ ಶಾಸಕರು ಹಾಗೂ 67 ಎಂ ಎಲ್ ಸಿ ಗಳ ಕ್ಷೇತ್ರಗಳಿಗೆ ಅನುದಾನ ಬಿಡುಗಡೆಯಾಗಿದೆ.ಆದರೆ ಈ ಸಣ್ಣಮೊತ್ತದ ಅನುದಾನದಿಂದ ಕ್ಷೇತ್ರ ಅಭಿವೃದ್ದಿ ಹೇಗೆ ಸಾಧ್ಯ ಎನ್ನುವ ಪ್ರಶ್ನೆಯನ್ನು ಕೆಲ ಪ್ರಭಾವಿ ಶಾಸಕರು ಮುಂದಿಟ್ಟಿದ್ದು, ಹೆಚ್ಚುವರಿ ಅನುದಾನಕ್ಕೆ ಸರ್ಕಾರದ ಮೇಲೆ ಒತ್ತಡ ಹಾಕುವ ಪ್ರಯತ್ನ ನಡೆಸಿದ್ದಾರೆ ಎನ್ನಲಾಗಿದೆ.





