ಕಾರ್ಕಳ: ಪಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಗಳಿಗೆ ಸೋಮವಾರ ಚುನಾವಣೆ ನಡೆಯಿತು.
ಅಧ್ಯಕ್ಷ ಸ್ಥಾನವು ಸಾಮಾನ್ಯ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನವು ಸಾಮಾನ್ಯ ವರ್ಗಕ್ಕೆ ಮೀಸಲಾಗಿತ್ತು. ಒಟ್ಟು 15 ಸದಸ್ಯ ಬಲದ ಪಳ್ಳಿ ಗ್ರಾಮ ಪಂಚಾಯಿತಿಯಲ್ಲಿ 14 ಬಿಜೆಪಿ ಬೆಂಬಲಿತ ಹಾಗೂ ಒಂದು ಕಾಂಗ್ರೆಸ್ ಬೆಂಬಲಿತ ಸದಸ್ಯರು ಆಯ್ಕೆಯಾಗಿದ್ದಾರೆ.
ಈ ಪೈಕಿ ಬಿಜೆಪಿ ಬೆಂಬಲಿತ ಉಷಾ ಅಂಚನ್ ಅವರನ್ನು ಅಧ್ಯಕ್ಷ ಸ್ಥಾನಕ್ಕೆ ಅಧಿಕೃತ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಲಾಗಿತ್ತು ಆದರೆ ಉಷಾ ಅಂಚನ್ ಸ್ಪರ್ಧೆ ವಿರುದ್ಧ ಕೆಲವು ಬಿಜೆಪಿ ಬೆಂಬಲಿತ ಸದಸ್ಯರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು ಇದಕ್ಕೆ ಪ್ರತಿಯಾಗಿ ಬಿಜೆಪಿ ಬೆಂಬಲಿತ ಬಂಡಾಯ ಅಭ್ಯರ್ಥಿಯಾಗಿ ಜೆನೆಟ್ ಮಾರ್ಟಿಸ್ ಅವರನ್ನು ಕಣಕ್ಕಿಳಿಸಲಾಗಿತ್ತು. ಅಂತಿಮವಾಗಿ ಬಿಜೆಪಿ ಬೆಂಬಲಿತ ಅಭ್ಯರ್ಥಿಯು 8 ಮತಗಳನ್ನು ಪಡೆದರೆ ಬಂಡಾಯ ಅಭ್ಯರ್ಥಿ 7 ಮತಗಳನ್ನು ಪಡೆದು ಅಧಿಕೃತ ಅಭ್ಯರ್ಥಿಗೆ ತೀವ್ರ ಪೈಪೋಟಿ ನೀಡಿ ಕೇವಲ ಮತದ ಅಂತರದಿಂದ ಪರಾಭಾವಗೊಂಡರು.

ಉಪಾಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಬೆಂಬಲಿತ ಗೋಪಾಲ ಆಚಾರ್ಯ ಅವಿರೋಧವಾಗಿ ಆಯ್ಕೆಯಾಗಿದ್ದಾರೆ .
ಕಾರ್ಕಳ ತಾಲೂಕಿನ ಹಲವು ಬಿಜೆಪಿ ಬೆಂಬಲಿತ ಪಂಚಾಯಿತಿಗಳಲ್ಲಿ ಸದಸ್ಯರು ಅಧಿಕೃತ ಅಭ್ಯರ್ಥಿಯನ್ನು ಒಪ್ಪದೇ ಬಂಡಾಯವಾಗಿ ಸ್ಪರ್ಧಿಸುತ್ತಿದ್ದು ಇದರಿಂದ ಬಿಜೆಪಿಯಲ್ಲಿನ ಸ್ಥಳೀಯ ನಾಯಕತ್ವದ ವಿರುದ್ಧ ಅಸಮಾಧಾನ ಬಹಿರಂಗವಾಗಿದೆ.

