ಕಾರ್ಕಳ: ಪಡುಬಿದ್ರೆ-ಕಾರ್ಕಳ ರಾಜ್ಯ ಹೆದ್ದಾರಿಯಲ್ಲಿನ ಬೆಳ್ಮಣ್ ಎಂಬಲ್ಲಿ ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಅತೀವೇಗವಾಗಿ ಸಾಗುತ್ತಿದ್ದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಪಾದಾಚಾರಿ ವ್ಯಕ್ತಿ ತೀವೃವಾಗಿ ಗಾಯಗೊಂಡು ಮೃತಪಟ್ಟ ಘಟನೆ ಭಾನುವಾರ ರಾತ್ರಿ ನಡೆದಿದೆ.
ಪಡುಬಿದ್ರೆ ಕಡೆಯಿಂದ ಕಾರ್ಕಳ ಕಡೆಗೆ ಕಾರು ಚಾಲಕ ಡಾ.ಪ್ರದೀಪ್ ಕಿಣಿ ಎಂಬವರು ತನ್ನ ಕಾರನ್ನು ಅತೀವೇಗವಾಗಿ ಚಲಾಯಿಸಿಕೊಂಡು ಬರುತ್ತಿದ್ದಾಗ ಬೆಳ್ಮಣ್ ಪೇಟೆಯ ಗಣೇಶ್ ಕ್ಲಿನಿಕ್ ಬಳಿ ಏಕಾಎಕಿ ವ್ಯಕ್ತಿಯೊಬ್ಬರು ರಸ್ತೆ ದಾಟುತ್ತಿದ್ದಾಗ ವೇಗವಾಗಿ ಹೋಗುತ್ತಿದ್ದ ಕಾರು ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಈ ಕುರಿತು ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



