ಕಾರ್ಕಳ: ಕಾರ್ಕಳ ತಾಲೂಕಿನ ಈದು ಗ್ರಾಮ ಪಂಚಾಯಿತಿ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಬೆಂಬಲಿತರ ನಡುವಿನ ಕಿತ್ತಾಟದಿಂದ ಕಾಂಗ್ರೆಸ್ ಬೆಂಬಲಿತ ಬಂಡಾಯ ಅಭ್ಯರ್ಥಿ ಚೀಟಿ ಎತ್ತುವ ಮೂಲಕ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಒಟ್ಟು 18 ಸದಸ್ಯ ಬಲದ ಈದು ಗ್ರಾಮ ಪಂಚಾಯಿತಿಯಲ್ಲಿ 12 ಸದಸ್ಯರು ಕಾಂಗ್ರೆಸ್ ಬೆಂಬಲಿತರಾಗಿದ್ದರೆ,ಐವರು ಬಿಜೆಪಿ ಹಾಗೂ ಓರ್ವ ಪಕ್ಷೇತರ ಸದಸ್ಯ ಆಯ್ಕೆಯಾಗಿದ್ದರು.

ಅಧ್ಯಕ್ಷ ಸ್ಥಾನವು ಸಾಮಾನ್ಯ ವರ್ಗಕ್ಕೆ ಮೀಸಲಾಗಿದ್ದು, ಕಾಂಗ್ರೆಸ್ ಬೆಂಬಲಿತ ಅಧಿಕೃತ ಅಭ್ಯರ್ಥಿಯಾಗಿ ವಿಜಯಕುಮಾರ್ ಜೈನ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದರು ಆದರೆ ಅಧ್ಯಕ್ಷ ಸ್ಥಾನಕ್ಕಾಗಿ ಸದಾನಂದ ಪೂಜಾರಿ ಪಟ್ಟು ಹಿಡಿದ ಹಿನ್ನೆಲೆಯಲ್ಲಿ ಬಂಡಾಯವಾಗಿ ಸ್ಪರ್ಧಿಸಿ ಇಬ್ಬರೂ ತಲಾ ಒಂಬತ್ತು ಮತಗಳನ್ನು ಪಡೆದು ಫಲಿತಾಂಶವನ್ನು ಟೈ ಮಾಡುವಲ್ಲಿ ಯಶಸ್ವಿಯಾದರು. ಎರಡು ಅಭ್ಯರ್ಥಿಗಳಿಗೂ ಸಮಾನ ಮತಗಳು ಬಿದ್ದ ಹಿನ್ನೆಲೆಯಲ್ಲಿ ಚುನಾವಣೆ ಅಧಿಕಾರಿ ಚೀಟಿ ಎತ್ತುವ ಮೂಲಕ ಬಂಡಾಯ ಅಭ್ಯರ್ಥಿ ಸದಾನಂದ ಪೂಜಾರಿ ಅಧ್ಯಕ್ಷರಾಗಿ ಚುನಾಯಿತರಾದರು.
ಉಪಾಧ್ಯಕ್ಷ ಸ್ಥಾನವು ಹಿಂದುಳಿದ ವರ್ಗ ಎ ಮಹಿಳೆಗೆ ಮೀಸಲಾಗಿದ್ದರಿಂದ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಸುಜಾತ ಅವಿರೋಧವಾಗಿ ಆಯ್ಕೆಯಾದರು

