ಹೆಬ್ರಿ : ತಾಲೂಕಿನ ವರಂಗ ಗ್ರಾಮ ಪಂಚಾಯಿತ್ ನ ನೂತನ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಸಂತೋಷ್ ಕುಮಾರ್ ಹಾಗೂ ಉಪಾಧ್ಯಕ್ಷರಾಗಿ ಪ್ರಮೀಳಾ ನಾಯ್ಕ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
18 ಮಂದಿ ಸದಸ್ಯರಿರುವ ವರಂಗ ಗ್ರಾಮ ಪಂಚಾಯಿತಿಯಲ್ಲಿ 14 ಮಂದಿ ಬಿಜೆಪಿ ಬೆಂಬಲಿತ ಇಬ್ಬರು ಕಾಂಗ್ರೆಸ್ ಬೆಂಬಲಿತ ಹಾಗೂ ಇಬ್ಬರು ಪಕ್ಷೇತರ ಸದಸ್ಯರಿದ್ದಾರೆ.
ಮೀಸಲಾತಿ ನಿಗದಿಯಲ್ಲಿ ಅಧ್ಯಕ್ಷ ಸ್ಥಾನ ಹಿಂದುಳಿದ ವರ್ಗ (ಎ) ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿತ್ತು.