ಕಾರ್ಕಳ: ತಾಲೂಕಿನ ಹಿರ್ಗಾನ ಗ್ರಾಮದಲ್ಲಿರುವ ‘ಬೆಂಗಾಲ್’ ಕೃಷಿ ಭೂಮಿಯಲ್ಲಿ ಕ್ರಿಯೇಟಿವ್ ಪಿ.ಯು ಕಾಲೇಜಿನ ವಾಣಿಜ್ಯ ವಿದ್ಯಾರ್ಥಿಗಳಿಗೆ ಕೃಷಿ ಮತ್ತು ಅದಕ್ಕೆ ಸಂಬAಧಿಸಿದ ವಸ್ತುಗಳ ಪ್ರದರ್ಶನದೊಂದಿಗೆ ಕೆಸರಿನಲ್ಲಿ ಜೀವನದ ಕಲಿಕೆ ಮತ್ತು ವಿವಿಧ ಆಟೋಟ ಕಾರ್ಯಕ್ರಮಗಳು ನಡೆದವು.
ಹಿರ್ಗಾನ ಗ್ರಾಮ ಪಂಚಾಯತ್ನ ಮಾಜಿ ಅಧ್ಯಕ್ಷ ಸಂತೋಷ್ ಶೆಟ್ಟಿ ಕಾರ್ಯಕ್ರಮವನ್ನು ನೇಜಿ ನೆಡುವ ಮೂಲಕ ಉದ್ಘಾಟಿಸಿ ಮಾತನಾಡಿ, ಇಂದು ನಮಗೆ ಧನ ಸಂಪಾದನೆಗೆ ಅನೇಕ ಮಾರ್ಗಗಳಿವೆ. ಆದರೆ ಹೊಟ್ಟೆ ತುಂಬಿಸಲು ರೈತ ಬೆಳೆದ ಬೆಳೆಯೇ ಬೇಕಾಗುತ್ತದೆ. ಆಹಾರದ ಉತ್ಪಾದನೆ ಇಲ್ಲದೇ ಹೋದರೆ ಎಷ್ಟೇ ಹಣವಿದ್ದರೂ ಬದುಕಲು ಅಸಾಧ್ಯ. ಆದ್ದರಿಂದ ವಿದ್ಯಾರ್ಥಿಗಳು ಕೃಷಿಯನ್ನು ತುಚ್ಛವಾಗಿ ಕಾಣದೇ ಭೂಮಿತಾಯಿಯ ಸೇವೆ ಎಂದು ಭಾವಿಸುವಂತಾಗಿ, ಭಾರತವು ಎಲ್ಲಾ ಕ್ಷೇತ್ರದಲ್ಲಿ ನಾಯಕತ್ವ ವಹಿಸುವಂತಾಗಲಿ, ಹಾಳು ಬಿದ್ದಿರುವ ಕೃಷಿ ಜಮೀನು ಬೆಳೆ ಬೆಳೆಯುವಂತಾಗಲಿ ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಹಸಂಸ್ಥಾಪಕ ಡಾ. ಗಣನಾಥ ಶೆಟ್ಟಿ ಅಧ್ಯಕ್ಷತೆ ವಹಿಸಿ ಮಾತನಾಡಿ, ‘ಕೈಕೆಸರಾದರೆ ಬಾಯಿ ಮೊಸರು’ ಎಂಬ ಮಾತಿನಂತೆ ಇಂದು ಎಲ್ಲರೂ ಕೃಷಿ ಚಟುವಟಿಕೆಯಿಂದ ದೂರವಾಗುತ್ತಿದ್ದೇವೆ. ಒಬ್ಬ ಕೃಷಿಕ ಪಡುವ ಕಷ್ಟ, ಬೆಳೆ ಬೆಳೆದು ರೈತನ ಕೈ ಸೇರಬೇಕಾದರೆ ತುಂಬಾ ದಿನಗಳು ಬೇಕಾಗುತ್ತದೆ. ಆಧುನಿಕತೆಯ ಭರಾಟೆಯ ಮಧ್ಯೆ ನಾವು ನಮ್ಮ ಮೂಲ ಕಸುಬಾದ ಕೃಷಿ, ಉಳುಮೆಯನ್ನೇ ಮರೆಯುತ್ತಿದ್ದೇವೆ. ಮುಂದೊAದು ದಿನ ಆಹಾರದ ಕೊರತೆ ಉಂಟಾಗುವ ಸಂದರ್ಭ ಎದುರಾಗಬಹುದು ಅದಕ್ಕಾಗಿ ನಾವು ಎಚ್ಚೆತ್ತು ಕೊಳ್ಳಬೇಕಾಗಿದೆ. ಕೆಸರಿನಿಂದ ಅನೇಕ ರೋಗ ರುಜಿನಗಳು ದೂರವಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ಪ್ರಗತಿಪರ ಕೃಷಿಕರಾದ ವಿಠ್ಠಲ್ ಕುಲಾಲ್, ಗೋಕುಲ್ ದಾಸ್ ವಾಗ್ಳೆಯವರನ್ನು ಸನ್ಮಾನಿಸಲಾಯಿತು.
ಸಂಸ್ಥೆಯ ಸಂಸ್ಥಾಪಕರಾದ ಅಮೃತ್ ರೈ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಗತಿಪರ ಕೃಷಿಕ ಜಗದೀಶ್ ಕಡಂಬ, ಉದ್ಯಮಿ ಶ್ರೀಧರ ಆಚಾರ್ಯ ವೇದಿಕೆಯಲ್ಲಿ ಉಪಸ್ಥಿತರಿದದರು.
ತ್ರಿಶಾ ಶೆಟ್ಟಿ ಸ್ವಾಗತಿಸಿ, ಸಾನ್ವಿ ರಾವ್ ನಿರೂಪಿಸಿ ವಂದಿಸಿದರು.
ತುಳುನಾಡಿನ 50ಕ್ಕೂ ಅಧಿಕ ವಿಶೇಷ ತಿಂಡಿ ತಿನಿಸುಗಳ ವಿತರಣೆ ನಡೆಯಿತು. ಹಳೆಯ ಕಾಲದ ಕೃಷಿ ಉಪಕರಣಗಳ ವಸ್ತು ಪ್ರದರ್ಶನ ಏರ್ಪಡಿಸಲಾಗಿತ್ತು.
ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಕೆ ಯೋಗೀಶ್ ಕಿಣಿ ಮಾತನಾಡಿ, ಕೃಷಿ ಸಂಸ್ಕೃತಿಯೇ ಭಾರತದ ಜೀವಾಳ ಇದನ್ನು ನಾವು ಅರಿತು ಬದುಕಬೇಕಾಗಿದೆ ಎಂದರು. ಕನ್ನಡ ಪ್ರಭ ದಿನಪತ್ರಿಕೆಯ ವರದಿಗಾರ ರಾಮ್ ಅಜೆಕಾರ್ ಉಪಸ್ಥಿತರಿದ್ದರು.
ಸಂಸ್ಥಾಪಕರಾದ ಅಶ್ವತ್ ಎಸ್. ಎಲ್ ಮತನಾಡಿ, ವೈಜ್ಞಾನಿಕ ಪ್ರಗತಿಯಷ್ಟೇ, ಕೃಷಿ ಕ್ಷೇತ್ರದಲ್ಲೂ ಆವಿಷ್ಕಾರ ನಡೆದು ಆರೋಗ್ಯಯುತವಾದ ಸಮೃದ್ಧ ಬದುಕು ಎಲ್ಲರಿಗೂ ದೊರೆಯುವಂಯತಾಗಲಿ ಎಂದು ಹಾರೈಸಿದರು.
ಪ್ರಾಚಾರ್ಯರಾದ ವಿದ್ವಾನ್ ಗಣಪತಿ ಭಟ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡವರಿಗೆ ಬಡತನವಿಲ್ಲ, ಪ್ರತಿ ಅನ್ನದ ಅಗುಳಿನ ಮೇಲೆ ಅತೀವ ಗೌರವವಿರಲಿ ಎಂದು ಕಿವಿಮಾತು ಹೇಳಿದರು.
ಸಂಸ್ಥಾಪಕರಾದ ಆದರ್ಶ ಎಂ.ಕೆ, ಅಮೃತ್ ರೈ ಉಪಸ್ಥಿತರಿದ್ದರು.
ವಿವಿಧ ಸ್ಪರ್ಧೆಗಳಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಉಪನ್ಯಾಸಕ ವಿನಾಯಕ ಜೋಗ್ ಪ್ರಶಸ್ತಿ ವಿಜೇತ ವಿದ್ಯಾರ್ಥಿಗಳ ಪಟ್ಟಿ ವಾಚಿಸಿದರು, ರಾಘವೇಂದ್ರ ರಾವ್ ಸ್ವಾಗತಿಸಿ,ಚಂದ್ರಕಾAತ ಆಚಾರ್ಯ ವಂದಿಸಿದರು. ಉಮೇಶ್ ಕಾರ್ಯಕ್ರಮ ನಿರೂಪಿಸಿದರು, .