ಉಡುಪಿ: ಉಡುಪಿ ಕೊರಂಗ್ರಪಾಡಿ ವ್ಯವಸಾಯಿಕ ಸಹಕಾರಿ ಸಂಘದ ಬೈಲೂರು ಶಾಖೆಯ ಮ್ಯಾನೇಜರ್ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಅಲೆವೂರು ನಿವಾಸಿ ಮಂಜೇಶ್ ಕುಮಾರ್ (49) ಭಾನುವಾರ ಅಲೆವೂರಿನ ತನ್ನ ಮನೆಯಲ್ಲಿ ಡೆತ್‌ನೋಟ್ ಬರೆದಿಟ್ಟು ನೇಣಿಗೆ ಶರಣಾಗಿದ್ದಾರೆ. ಕಳೆದ ಹಲವು ಸಮಯದಿಂದ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಮಂಜೇಶ್ ಮಾನಸಿಕವಾಗಿ ನೊಂದು ಈ ಕೃತ್ಯ ಎಸಗಿದ್ದಾರೆ ಎಂದು ಶಂಕಿಸಲಾಗಿದೆ.
ಇತ್ತೀಚಿಗೆ ಬಡ್ತಿ ಪಡೆದು ಕೊರಂಗ್ರಪಾಡಿ ವ್ಯವಸಾಯಿಕ ಸಹಕಾರಿ ಸಂಘದ ಬೈಲೂರು ಶಾಖಾ ಮ್ಯಾನೇಜರ್ ಆಗಿ ನೇಮಕಗೊಂಡಿದ್ದರು.
ಅಲೆವೂರು ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಮಾಜಿ ಅಧ್ಯಕ್ಷರಾಗಿದ್ದ ಇವರು, ಸರಳ ಸಜ್ಜನಿಕೆಯ ವ್ಯಕ್ತಿತ್ವ ಹೊಂದಿದ್ದು, ಅಪಾರ ಅಭಿಮಾನಿಗಳನ್ನು ಗಳಿಸಿ ಜನಮನ್ನಣೆಗೆ ಪಾತ್ರರಾಗಿದ್ದರು.
ಮಣಿಪಾಲ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಚೋಪ್ರಾಗೆ ಕಠಿಣ ಪೈಪೋಟಿ ನೀಡಿದ ಪಾಕಿಸ್ತಾನದ ಅರ್ಶದ್ ನದೀಂ ತಮ್ಮ 3ನೇ ಪ್ರಯತ್ನದಲ್ಲಿ 87.82 ಮೀ. ದೂರಕ್ಕೆ ಎಸೆದು ಬೆಳ್ಳಿ ಪದಕ ತಮ್ಮದಾಗಿಸಿಕೊಂಡರು. ಚೆಕ್ ಗಣರಾಜ್ಯದ ಜಾಕುಬ್ ವೆಡ್ಲೆಜ್ 86.67 ಮೀ. ದೂರಕ್ಕೆ ಜಾವೆಲಿನ್ ಎಸೆದು ಕಂಚಿನ ಪದಕ ತಮ್ಮದಾಗಿಸಿಕೊಂಡರು.
ನೀರಜ್ ವಿಶ್ವದ ಎಲ್ಲಾ ಪ್ರಮುಖ ಕೂಟಗಳಲ್ಲೂ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ. 2018ರಲ್ಲಿ ಏಷ್ಯನ್ ಗೇಮ್ಸ್ನಲ್ಲಿ ಚಿನ್ನ ಗೆದ್ದಿದ್ದ ಅವರು, ಅದೇ ವರ್ಷ ಕಾಮನ್‌ವೆಲ್ತ್ ಗೇಮ್ಸ್ನಲ್ಲಿ ಚಾಂಪಿಯನ್ ಎನಿಸಿಕೊಂಡರು. 2021ರಲ್ಲಿ ಟೋಕಿಯೋ ಒಲಿಂಪಿಕ್ಸ್ ಚಿನ್ನ ಗೆದ್ದ ಬಳಿಕ ಕಳೆದ ವರ್ಷ ಡೈಮಂಡ್ ಲೀಗ್ ಪ್ರಶಸ್ತಿ ತನ್ನದಾಗಿಸಿಕೊಂಡರು. ವಿಶ್ವ ಕೂಟದಲ್ಲಿ ಬಾಕಿ ಇದ್ದ ಸ್ವರ್ಣವನ್ನು ಈ ಬಾರಿ ಕೊರಳಿಗೇರಿಸಿಕೊಂಡರು.