ಮೈಸೂರು: ದೇಶದ ಇತಿಹಾಸದಲ್ಲೆ ಅತಿ ದೊಡ್ಡ ಕಲ್ಯಾಣ ಕಾರ್ಯಕ್ರಮ ಎನ್ನಲಾಗುತ್ತಿರುವ ಮನೆಯ ಯಜಮಾನಿಗೆ ಪ್ರತಿ ತಿಂಗಳು 2 ಸಾವಿರ ರುಪಾಯಿ ನೀಡುವ ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ನಾಲ್ಕನೇ ಗ್ಯಾರಂಟಿಯಾದ ಗೃಹಲಕ್ಷ್ಮಿ ಯೋಜನೆಗೆ ಬುಧವಾರ ಅದ್ಧೂರಿ ಚಾಲನೆ ಸಿಕ್ಕಿದೆ.
ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಮದ್ಯಾಹ್ನ ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಉಪಸ್ಥಿತಿಯಲ್ಲಿ ರಾಜ್ಯಸಭಾ ಪ್ರತಿಪಕ್ಷದ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಟನ್ ಒತ್ತುವ ಮೂಲಕ ಯೋಜನೆಗೆ ಚಾಲನೆ ನೀಡಿದ್ದಾರೆ.
ಇದೇ ವೇಳೆ ಸರಕಾರಕ್ಕೆ 100 ದಿನ ಪುರೈಕೆ ಹಿನ್ನೆಲೆಯಲ್ಲಿ ಸರ್ಕಾರದ ಸಾಧನೆ ಕುರಿತ ಕಿರುಹೊತ್ತಿಗೆ ಬಿಡುಗಡೆ ಮಾಡಲಾಯ್ತು. DBT ಮೂಲಕ ಗೃಹ ಲಕ್ಷ್ಮಿ ಯೋಜನೆ ಫಲಾನುಭವಿಗಳ ಅಕೌಂಟ್ ಗೆ 2 ಸಾವಿರ ವರ್ಗಾವಣೆ ಗೆ ರಾಹುಲ್ ಗಾಂಧಿ ಚಾಲನೆ ನೀಡಿದರು. ಇದೇ ವೇಳೆ ಸಾಂಕೇತಿಕವಾಗಿ 10 ಫಲಾನುಭವಿಗಳಿಗೆ ಡಿಜಿಟಲ್ ಕಾರ್ಡ್ ವಿತರಣೆ ಮಾಡಲಾಯಿತು.
ಬಳಿಕ ಮಾತನಾಡಿದ ರಾಹುಲ್ ಗಾಂಧಿ, ರಾಹುಲ್ ಗಾಂಧಿ ಕರ್ನಾಟಕ ಇಡೀ ದೇಶಕ್ಕೆ ದಿಕ್ಸೂಚಿಯಾಗಿದೆ. ನಮ್ಮ ಗ್ಯಾರಂಟಿ ಘೋಷಣೆ ವೇಳೆ ಕೇಂದ್ರ ಸರ್ಕಾರ ಟೀಕೆ ಮಾಡಿತ್ತು. ಆದ್ರೆ ನಾವಿಂದು ನುಡಿದಂತೆ ನಡೆದಿದ್ದೇವೆ. ಕರ್ನಾಟಕರ ನಮ್ಮ ತಾಯಂದಿರು, ಅಕ್ಕ-ತಂಗಿಯರು ಉಚಿತವಾಗಿ ಕರ್ನಾಟಕ ಸುತ್ತಾಡುತ್ತಿದ್ದಾರೆ. ಉಚಿತ ವಿದ್ಯುತ್ ನೀಡಲಾಗಿದೆ, ಇಂದು ಒಂದು ಕೋಟಿಗೂ ಹೆಚ್ಚು ಮಹಿಳೆಯರ ಖಾತೆಯಲ್ಲಿ ಎರಡು ಸಾವಿರ ಹಣ ಇದೆ. ಭಾರತ ದೇಶದ ಅತಿ ದೊಡ್ಡ ಹಣ ವರ್ಗಾವಣೆಯನ್ನು ನಮ್ಮ ಸರ್ಕಾಸೇವ್ ಮಾಡಬಹುದು, ಮಕ್ಕಳಿಗೆ ಪುಸ್ತಕ ಕೊಡಿಸಬಹುದು. ಇದರ ಸಂಪೂರ್ಣ ಉಪಯೋಗ ಮಹಿಳೆಯರ ಮೇಲಿದೆ ಎಂದರು.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಾತನಾಡಿ,ನಮ್ಮ ಸರ್ಕಾರ ನುಡಿದಂತೆ ನಡೆದಿದೆ. ಸಿದ್ದರಾಮಯ್ಯ ನೇತೃತ್ವದ ಸರ್ಕಾರ 5 ಗ್ಯಾರಂಟಿಗಳನ್ನು ಘೋಷಿಸಿದ್ದು ಈಗಾಗಲೇ 4 ಗ್ಯಾರಂಟಿ ಘೋಷಣೆಯಾಗಿದೆ. ಒಂದು ಮಾತ್ರ ಬಾಕಿ ಇದೆ. ಯಾವ ಸರ್ಕಾರವೂ ಈ ರೀತಿಯ ಯೋಜನೆಗಳನ್ನು ಮಾಡಿಲ್ಲ. ಇಡೀ ಭಾರತದಲ್ಲಿ ಒಪ್ಪುವಂತಹ ಗ್ಯಾರಂಟಿಗಳಿವು. ಚುನಾವಣೆ ಮುಂಚೆ ನಾವು ಗ್ಯಾರಂಟಿ ಘೋಷಣೆ ಮಾಡಿದಗ, ಕೇಂದ್ರ ನಾಯಕರು ಟೀಕೆ ಮಾಡಿದರು. ಇದರಿಂದ ಆರ್ಥಿಕತೆ ಕುಸಿಯುತ್ತೆ. ಬೋಗಸ್ ಎಂದಿದ್ದರು. ಆದ್ರೆ ನಾವು ಇದನ್ನು ಮಾಡಿ ತೊರಿಸಿದ್ದೇವೆ ಎಂದರು.
ಡಿಸಿಎA ಡಿ.ಕೆ ಶಿವಕುಮಾರ್ ಮಾತನಾಡಿ, ಭಾರತ್ ಜೋಡೋ ಯಾತ್ರೆ ಯಶಸ್ವಿಯಾಗಿ ರಾಹುಲ್ ಗಾಂಧಿ ಹೆಜ್ಜೆ ಹಾಕಿದ್ರು. ಆಗ ಅವರು ಕಂಡಿದ್ದು ನಿಮ್ ಹಸಿವು ನಿರುದ್ಯೋಗ ಸಮಸ್ಯೆ ಮತ್ತು ಬಡತನ. ಅದನ್ನ ನಿಗಿಸುವ ಕೆಲಸ ಮಾಡಬೇಕು ಎಂದು ನನಗೆ ಮತ್ತು ಸಿದ್ದರಾಮಯ್ಯವರಿಗೆ ಕಿವಿ ಮಾತು ಹೇಳಿದರು. ಐದು ಗ್ಯಾರಂಟಿಗಳ ಮೂಲಕ ಚುನಾವಣೆಯನ್ನು ಎದುರಿಸಿ ಗೆದ್ದಿದ್ದೇವೆ. ಈಗಾಗಲೇ ನಾವು ನಾಲ್ಕು ಗ್ಯಾರಂಟಿ ಜಾರಿ ಮಾಡಿದ್ದೇವೆ. ನಮ್ಮ ಎಲ್ಲಾ ಗ್ಯಾರಂಟಿಗಳಿಗೆ ರಾಹುಲ್ ಗಾಂಧಿ ಮಾರ್ಗದರ್ಶನ ನೀಡಿದ್ದಾರೆ. ನಾವು ನಡೆದಿದಂತೆ ನಡೆದಿದ್ದೇವೆ. ನಮ್ಮ ಸರ್ಕಾರದ ರೀತಿ ಯಾವ ರಾಜ್ಯದಲ್ಲಿ ಈ ರೀತಿಯ ಕಾರ್ಯಕ್ರಮಗಳನ್ನ ತಂದಿಲ್ಲ ಎಂದರು.
ಮುಖ್ಯಮAತ್ರಿ ಸಿದ್ದರಾಮಯ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಚಿವರಾದ ಡಾ.ಎಚ್.ಸಿ.ಮಹದೇವಪ್ಪ, ಲಕ್ಷ್ಮಿ ಹೆಬ್ಬಾಳ್ಕರ್, ಕೆ.ಎಚ್.ಮುನಿಯಪ್ಪ, ಕೆ.ವೆಂಕಟೇಶ್, ಎನ್. ಚಲುವರಾಯಸ್ವಾಮಿ, ಕೆ.ಎನ್.ರಾಜಣ್ಣ, ಎಸ್.ಎಸ್. ಬೋಸರಾಜು, ಮೇಯರ್ ಶಿವಕುಮಾರ್ ಮತ್ತಿತರರು ವೇದಿಕೆಯಲ್ಲಿದ್ದರು.