ಕಾರ್ಕಳ : ಕಾರ್ಕಳ ತಾಲೂಕಿನ ಉಡುಪಿ -ಕಾರ್ಕಳ ರಾಜ್ಯ ಹೆದ್ದಾರಿಯಲ್ಲಿ ಕುಕ್ಕುಂದೂರು ಗ್ರಾಮದ ಪಿಲಿಚಂಡಿ ದೇವಸ್ಥಾನದ ಬಳಿ ಮೀನು ಸಾಗಿಸುತ್ತಿದ್ದ ಬೊಲೆರೋ ಪಿಕಪ್ ಗೂಡ್ಸ್ ಹಾಗೂ ಕಾರು ಡಿಕ್ಕಿಯಾದ ಪರಿಣಾಮ ಪಿಕಪ್ ಸವಾರ ಗಾಯಗೊಂಡಿದ್ದಾರೆ.
ಬುಧವಾರ ಬೆಳಿಗ್ಗೆ ಬೊಲೆರೋ ಪಿಕಪ್ ಮಲ್ಪೆಯಿಂದ ಮೀನು ತುಂಬಿಕೊಂಡು ಕಾರ್ಕಳ ಕಡೆಗೆ ಬರುತ್ತಿದ್ದಾಗ ಕಾರ್ಕಳ ಕಡೆಯಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಕಾರು ಮುಖಾಮುಖಿ ಡಿಕ್ಕಿಯಾಗಿವೆ.
ಅಪಘಾತಕ್ಕೆ ಎರಡೂ ವಾಹನಗಳು ಜಖಂಗೊಂಡಿದ್ದು ಪಿಕಪ್ ಚಾಲಕ ಅಬ್ದುಲ್ ರಹಿಮಾನ್ ಅವರು ಗಾಯಗೊಂಡಿದ್ದಾರೆ. ಈ ಕುರಿತು ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.