ಹೆಬ್ರಿ: ಮುನಿಯಾಲಿನ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಗುರುವಾರ ನಡೆದ ಕಾರ್ಕಳ ಹಾಗೂ ಹೆಬ್ರಿ ತಾಲೂಕಿನ ಪ್ರೌಢಶಾಲಾ ವಿಭಾಗದ ಕಬಡ್ಡಿ ಪಂದ್ಯಾಟದಲ್ಲಿ ಬಾಲಕರ ವಿಭಾಗದಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಮುನಿಯಾಲು ಹಾಗೂ ಬಾಲಕಿಯರ ವಿಭಾಗದಲ್ಲಿ ಕಾರ್ಕಳದ ಪೆರ್ವಾಜೆ ಸುಂದರ ಪುರಾಣಿಕ ಪ್ರೌಢಶಾಲೆ ಪ್ರಥಮ ಸ್ಥಾನ ಗಳಿಸಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿವೆ.
ಕಾರ್ಕಳ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಕಾರ್ಕಳ ಹಾಗೂ ಹೆಬ್ರಿ ತಾಲೂಕಿನ ಬಾಲಕರ 16 ತಂಡಗಳು ಹಾಗೂ ಬಾಲಕಿಯರ 7 ತಂಡಗಳು ಭಾಗವಹಿಸಿದ್ದವು.
ಬಾಲಕರ ವಿಭಾಗದ ಫೈನಲ್ ಪಂದ್ಯಾಟದಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಮುನಿಯಾಲು ಹಾಗೂ ಕರ್ನಾಟಕ ಪಬ್ಲಿಕ್ ಸ್ಕೂಲ್ ಹೊಸ್ಮಾರು ನಡುವೆ ನಡೆದ ಪಂದ್ಯದಲ್ಲಿ ಕೆಪಿಎಸ್ ಮುನಿಯಾಲು ಚಾಂಪಿಯನ್ ಆಗಿ ಹೊರಹೊಮ್ಮಿದರೆ ಕೆಪಿಎಸ್ ಹೊಸ್ಮಾರು ರನ್ನರ್ ಅಪ್ ಸ್ಥಾನ ಪಡೆದುಕೊಂಡಿತು.
ಬಾಲಕಿಯರ ವಿಭಾಗದಲ್ಲಿ ಫೈನಲ್ ಪಂದ್ಯದಲ್ಲಿ ಕಾರ್ಕಳ ಪೆರ್ವಾಜೆ ಸುಂದರ ಪುರಾಣಿಕ ಸರ್ಕಾರಿ ಪ್ರೌಢಶಾಲೆ ಹಾಗೂ ಗುರುಕೃಪಾ ಸೆಂಟ್ರಲ್ ಸ್ಕೂಲ್, ಬಲ್ಯೊಟ್ಟು ಹೊಸ್ಮಾರು ನಡುವೆ ತೀವ್ರ ಹಣಾಹಣಿ ಏರ್ಪಟ್ಟು ಅಂತಿಮವಾಗಿ ಕಾರ್ಕಳ ಸುಂದರ ಪುರಾಣಿಕ ಸರ್ಕಾರಿ ಪ್ರೌಢ ಶಾಲೆಯು ಪ್ರಶಸ್ತಿ ತನ್ನದಾಗಿಸಿಕೊಂಡರೆ ಗುರುಕೃಪಾ ಸೆಂಟ್ರಲ್ ಸ್ಕೂಲ್ ರನ್ನರ್ ಅಪ್ ಸ್ಥಾನ ಪಡೆದುಕೊಂಡಿತು.
ಕಳೆದ ಸಲದ ಕಬಡ್ಡಿ ಪಂದ್ಯಾಟದಲ್ಲಿ ರನ್ನರ್ ಅಪ್ ಆಗಿದ್ದ ಮುನಿಯಾಲು ಕೆಪಿಎಸ್ ಬಾಲಕಿಯರ ತಂಡವು ಈ ಬಾರಿ ಸೆಮಿಫೈನಲ್ ನಲ್ಲಿ ಮುಗ್ಗರಿಸಿದ್ದು ಚಾಂಪಿಯನ್ ಆಗುವ ಅವಕಾಶದಿಂದ ವಂಚಿತವಾಯಿತು