ಕಾರ್ಕಳ: ಅರ್ಜಿದಾರರ ಬಳಿ ಹಣಕ್ಕಾಗಿ ಬೇಡಿಕೆಯಿಟ್ಟು ಲಂಚ ಸ್ವೀಕರಿಸುವಾಗಲೇ ಲೋಕಾಯುಕ್ತ ಪೊಲೀಸ್ ಬಲೆಗೆ ಬಿದ್ದ ಅಜೆಕಾರು ನಾಡಕಚೇರಿಯ ಪ್ರಥಮ ದರ್ಜೆ ಸಹಾಯಕ ನಿಜಾಮುದ್ಧೀನ್ ಅವರನ್ನು ಲೋಕಾಯುಕ್ತ ಪೊಲೀಸರು ವೈದ್ಯಕೀಯ ತಪಾಸಣೆ ನಡೆಸಿದ ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು,ನ್ಯಾಯಾಲಯವು ಅವರಿಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.
ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದ ಅರ್ಜಿದಾರರೊಬ್ಬರು ತಮ್ಮ ಆಸ್ತಿ ವಿಭಜನೆ ಸಲುವಾಗಿ ಸಂತತಿ ನಕ್ಷೆಗೆ ಅರ್ಜಿ ಸಲ್ಲಿಸಿದ್ದರು.ಈ ವೇಳೆ ನಾಡಕಚೇರಿಯ ಪ್ರಥಮ ದರ್ಜೆ ಸಹಾಯಕ ನಿಜಾಮುದ್ಧೀನ್ ಅವರು ಅರ್ಜಿದಾರರ ಬಳಿ ಲಂಚಕ್ಕೆ ಬೇಡಿಕೆಯಿಟ್ಟಿದ್ದರು. ಈ ಹಿನ್ನೆಲೆಯಲ್ಲಿ ಅರ್ಜಿದಾರರು ಲೋಕಾಯುಕ್ತ ಪೊಲೀಸರಿಗೆ ಮಾಹಿತಿ ನೀಡಿದ್ದರು. ಈ ಕುರಿತು ಅಲರ್ಟ್ ಆಗಿದ್ದ ಲೋಕಾಯುಕ್ತ ಪೊಲೀಸರ ತಂಡವು ಎಫ್ ಡಿಎ ನಿಜಾಮುದ್ಧೀನ್ ಅರ್ಜಿದಾರರಿಂದ ಹಣ ಸ್ವೀಕರಿಸುವಾಗಲೇ ಬಲೆಗೆ ಕೆಡವಿ ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಿದ ಬಳಿಕ ಬಂಧಿಸಿದ್ದರು.