ಬೆಂಗಳೂರು: ಸಂಸದ, ಜೆಡಿಎಸ್ ನಾಯಕ ಪ್ರಜ್ವಲ್ ರೇವಣ್ಣ ಅವರ ಆಯ್ಕೆಯನ್ನು ಅಸಿಂಧುಗೊಳಿಸಿ ಇಂದು ಹೈಕೋರ್ಟ್ ಆದೇಶ ನೀಡಿದೆ.
ಪ್ರಜ್ವಲ್ ರೇವಣ್ಣ ಅವರು ಚುನಾವಣಾ ಪ್ರಮಾಣ ಪತ್ರದಲ್ಲಿ ತಪ್ಪು ಮಾಹಿತಿ ನೀಡಿದ್ದಾರೆಂದು ಆರೋಪಿಸಿ ವಕೀಲ ದೇವರಾಜೇಗೌಡ ಅವರು ಪ್ರಜ್ವಲ್ ವಿರುದ್ಧ ನ್ಯಾಯಾಲಯದ ಮೆಟ್ಟಿಲೇರಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ ನಟರಾಜನ್ ಅವರ ನೇತೃತ್ವದ ಪೀಠ ಪ್ರಜ್ವಲ್ ರೇವಣ್ಣ ಅವರನ್ನು ಸಂಸದ ಸ್ಥಾನದಿಂದ ಅಸಿಂಧುಗೊಳಿಸಿ ಆದೇಶ ಹೊರಡಿಸಿದೆ.
ಅಲ್ಲದೆ ಅಕ್ರಮ ಎಸಗಿರುವುದರಿಂದ ತಮ್ಮನ್ನು ವಿಜೇತ ಅಭ್ಯರ್ಥಿಯೆಂದು ಘೋಷಿಸಬೇಕು ಎಂದು ಕೋರಿದ್ದ ಪರಾಜಿತ ಅಭ್ಯರ್ಥಿ ಎ ಮಂಜು ಅವರ ಮನವಿಯನ್ನು ಪುರಸ್ಕರಿಸಲು ನ್ಯಾಯಾಲಯ ನಿರಾಕರಿಸಿದ್ದು ಅರ್ಜಿದಾರರು ಚುನಾವಣಾ ಅಕ್ರಮ ಎಸಗಿರುವುದರಿಂದ ಅವರನ್ನು ವಿಜೇತ ಅಭ್ಯರ್ಥಿಯೆಂದು ಘೋಷಿಸಲಾಗದು ಎಂದು ನ್ಯಾಯಾಲಯ ಆದೇಶಿಸಿದೆ.