ಮಂಗಳೂರು: ಮಂಗಳೂರು ನಗರ ವ್ಯಾಪ್ತಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ ಆಯೋಜನೆ ಮಾಡಲು ಪೋಲಿಸ್ ಅನುಮತಿಯನ್ನು ಕಡ್ಡಾಯಗೊಳಿಸಲಾಗಿದೆ. ಮೊಸರು ಕುಡಿಕೆಯ ಮಡಿಕೆಗಳನ್ನು 14 ಫೀಟ್ ಎತ್ತರದವರೆಗೆ ಮಾತ್ರ ಕಟ್ಟಬೇಕು, ಮಡಿಕೆ ಹೊರತುಪಡಿಸಿ ಬೇರೆ ಯಾವುದೇ ವಸ್ತುಗಳನ್ನು ಕಟ್ಟುವಂತಿಲ್ಲ ಹಾಗೂ ಮಡಿಕೆ ಒಡೆಯುವ ಸ್ವಯಂಸೇವಕರ ಮೇಲೆ ತಂಪು ನೀರು ಚೆಲ್ಲುವಂತಿಲ್ಲ.
ಮೆರವಣಿಗೆಯಲ್ಲಿ ಸುಸಜ್ಜಿತ ಆಂಬುಲೆನ್ಸ್ ವ್ಯವಸ್ಥೆ ಮಾಡಿರಬೇಕು ಹಾಗೂ ಯಾವುದೇ ಕಾರಣಕ್ಕೂ ಡಿಜೆ ಬಳಸುವಂತಿಲ್ಲ ಎಂದು ಮಂಗಳೂರು ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.