ಕಾರ್ಕಳ: ಅಜೆಕಾರು ವ್ಯವಸಾಯಿಕ ಸೇವಾ ಸಹಕಾರಿ ಸಂಘದ ಮಾಜಿ ಅಧ್ಯಕ್ಷರು ಹಾಗೂ ಹಿರಿಯ ಸಹಕಾರಿ ಧುರೀಣ ಹೆರ್ಮುಂಡೆ ಕಲಾಯಿಗುತ್ತು ಭವಾನಿ ಶಂಕರ್ (60) ಅಲ್ಪಕಾಲದ ಅಸೌಖ್ಯದಿಂದ ಭಾನುವಾರ ಮುಂಜಾನೆ ಮಣಿಪಾಲ ಆಸ್ಪತ್ರೆಯಲ್ಲಿ ನಿಧನರಾದರು.
ಕಳೆದ 30 ವರ್ಷಗಳಿಂದ ಸಹಕಾರಿ ಸಂಘದಲ್ಲಿ ಸೇವೆ ಸಲ್ಲಿಸುತ್ತಿದ್ದ ಇವರು ಕಾರ್ಕಳ ಕೃಷಿ ಉತ್ಪನ್ನ ಮಾರಾಟ ಸಹಕಾರಿ ಸಂಘದ ನಿರ್ದೇಶಕರಾಗಿದ್ದು, ಪ್ರಾಥಮಿಕ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಸಹಕಾರಿ ಸಂಘದ ಮಾಜಿ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು.
ಇದಲ್ಲದೇ ಹೆರ್ಮುಂಡೆ ವಿಷ್ಣುಮೂರ್ತಿ ದೇವಸ್ಥಾನದ ಆಡಳಿತ ಮೊಕ್ತೇಸರರಾಗಿ ಉತ್ಸವ ಸಮಿತಿ ಅಧ್ಯಕ್ಷರಾಗಿದ್ದಾರೆ.
ರಾಜಕೀಯವಾಗಿ ಆರಂಭದಲ್ಲಿ ಕಾಂಗ್ರೆಸ್ ಮುಖಂಡರಾಗಿ ಸಾಕಷ್ಟು ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸಿ ಬಳಿಕ ಬಿಜೆಪಿ ಸೇರ್ಪಡೆಯಾಗಿ ಅಜೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದಲ್ಲಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.
ಮೃತರು ಪತ್ನಿ ,ಇಬ್ಬರು ಪುತ್ರಿಯರು ಸೇರಿ ಅಪಾರ ಬಂಧುಗಳನ್ನು ಅಗಲಿದ್ದಾರೆ.
ಗಣ್ಯರ ಸಂತಾಪ:
ಭವಾನಿ ಶಂಕರ್ ನಿಧನಕ್ಕೆ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ ಎನ್ ರಾಜೇಂದ್ರ ಕುಮಾರ್, ಕಾರ್ಕಳ ಶಾಸಕ ವಿ ಸುನಿಲ್ ಕುಮಾರ್, ಅಜೆಕಾರು ವ್ಯವಸಾಯಿಕ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಶಾಂತಿರಾಜ್ ಜೈನ್ ಸೇರಿದಂತೆ ಹಲವಾರು ಗಣ್ಯರು ಸಂತಾಪಸೂಚಿಸಿದ್ದಾರೆ