ಉಡುಪಿ : ರಾಜ್ಯ ಸರ್ಕಾರ ಸೋಮವಾರ ರಾತ್ರಿ ಹಲವು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದ್ದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಹಾಕೆ ಮಚ್ಚೀಂದ್ರ ಅವರನ್ನು ಕೂಡ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕಲಬುರಗಿ ಪೊಲೀಸ್ ತರಬೇತಿ ಸಂಸ್ಥೆಯ ಪ್ರಾಂಶುಪಾಲರಾದ ಡಾ. ಅರುಣ್. ಕೆ ಅವರನ್ನು ನೇಮಕ ಮಾಡಿ ಆದೇಶಿಸಿದೆ.
ವರ್ಗಾವಣೆಗೊಂಡ ಅಕ್ಷಯ್ ಹಾಕೆ ಮಚ್ಚೀಂದ್ರ ಅವರಿಗೆ ಈವರೆಗೆ ಸ್ಥಳ ನಿಗದಿ ಮಾಡಿಲ್ಲ.
ಕಾರ್ಕಳ ನಕ್ಸಲ್ ನಿಗ್ರಹ ಪಡೆಯ ಎಸ್ಪಿ ನಿಕಂ ಪ್ರಕಾಶ್ ಅಮೃತ್ ಅವರನ್ನು ವಯರ್ ಲೆಸ್ ವಿಭಾಗದ ಎಸ್ ಪಿ ಆಗಿ ವರ್ಗಾಯಿಸಲಾಗಿದೆ.
ಉಡುಪಿ ಕರಾವಳಿ ರಕ್ಷಣಾ ಪಡೆ ಎಸ್ಪಿ ಅಬ್ದುಲ್ ಅಹದ್ ಅವರನ್ನು ಬೆಂಗಳೂರು ಕೇಂದ್ರ ವಿಭಾಗದ ಎಸ್ಪಿಯಾಗಿ ವರ್ಗಾಯಿಸಲಾಗಿದೆ.