ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ತೀವ್ರ ವಾಯುಭಾರ ಕುಸಿತದ ಪರಿಣಾಮ ಕರ್ನಾಟಕದಲ್ಲಿ ಇಂದಿನಿಂದ 5 ದಿನಗಳ ಕಾಲ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಕಡೆ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಕರಾವಳಿ ಬಹುತೇಕ ಕಡೆಗಳಲ್ಲಿ ಬಾರೀ ಮಳೆಯಾಗಲಿದೆ
ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಯಲ್ಲು ಭಾರೀ ಮಳೆ ಮುನ್ಸೂಚನೆ ನೀಡಲಾಗಿದ್ದು, ದಕ್ಷಿಣ ಕನ್ನಡ, ಉತ್ತರಕನ್ನಡ, ಉಡುಪಿ ಜಿಲ್ಲೆಗಳಿಗೆ ಇಂದಿನಿಂದ ಮೂರು ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.
ಮಂಗಳೂರಲ್ಲಿ ಇಡೀ ದಿನ ಮೋಡ ಕವಿದ ವಾತಾವರಣ ಇದ್ದು, ಬೆಳ್ತಂಗಡಿ, ಚಾರ್ಮಾಡಿ, ಧರ್ಮಸ್ಥಳ, ಪುತ್ತೂರು, ಸುಳ್ಯಗಳಲ್ಲಿ ಉತ್ತಮ ಮಳೆಯಾಗಿದೆ. ಮುಂದಿನ 2 ದಿನ ಕರಾವಳಿಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.