Share this news

ಬಾಗಲಕೋಟೆ: ಕಾಂಗ್ರೆಸ್ ಪಕ್ಷದಲ್ಲಿ 136 ಜನ ಶಾಸಕರಿದ್ದು ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸುವುದು ಹುಡುಗಾಟಕೆಯ ವಿಚಾರವಲ್ಲ ಎಂದು ವಿಧಾನ ಪರಿಷತ್ ಸದಸ್ಯ ಎಚ್ ವಿಶ್ವನಾಥ್ ಹೇಳಿದ್ದಾರೆ.

ಅವರು ಬಾಗಲಕೋಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ವಿಧಾನ ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ಅವರ ಹೇಳಿಕೆಯಂತೆ ಸಣ್ಣ ಸಮಾಜಗಳಿಗೂ ರಾಜಕೀಯದಲ್ಲಿ ಅಧಿಕಾರ ಸಿಗಬೇಕು ಆದರೆ ಕಾಂಗ್ರೆಸ್ ಸರ್ಕಾರದಲ್ಲಿ ಈಡಿಗ ಸಮುದಾಯವನ್ನು ನಿರ್ಲಕ್ಷ್ಯ ಮಾಡಲಾಗಿದೆ ಎನ್ನುವ ಮಾತು ಸರಿಯಲ್ಲ ಎಂದರು. ಈಡಿಗ ಸಮಾಜಕ್ಕೆ ಕಾಂಗ್ರೆಸ್ ಪಕ್ಷವು ನೀಡಿದಷ್ಟು ಆದ್ಯತೆ ಹಾಗೂ ಅವಕಾಶ ಬೇರೆ ಯಾವ ಪಕ್ಷವು ನೀಡಿಲ್ಲ, ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಕಾಲದ ಬಳಿಕವೂ ಅವರ ಪುತ್ರ ಮಧು ಬಂಗಾರಪ್ಪ ಅವರಿಗೆ ಸಚಿವ ಸ್ಥಾನ ನೀಡಲಾಗಿದೆ ಅದೇ ರೀತಿ ಹಿರಿಯ ಕಾಂಗ್ರೆಸ್ ಮುಖಂಡ ಕಾಗೋಡು ತಿಮ್ಮಪ್ಪ ಅವರಿಗೂ ಸ್ಪೀಕರ್ ಹಾಗೂ ಸಚಿವ ಸ್ಥಾನವನ್ನು ನೀಡಲಾಗಿತ್ತು ಎಲ್ಲಾ ಸಣ್ಣಪುಟ್ಟ ಸಮುದಾಯಗಳಿಗೂ ಕಾಂಗ್ರೆಸ್ ಸಮಾನ ಅವಕಾಶ ನೀಡಿದ ಏಕೈಕ ಪಕ್ಷವಾಗಿದೆ ಎಂದು ವಿಶ್ವನಾಥ್ ಹೇಳಿದರು

Leave a Reply

Your email address will not be published. Required fields are marked *