ಬೆಂಗಳೂರು: ಸಿಎಂ ಸಿದ್ಧರಾಮಯ್ಯ ನೇತೃತ್ವದ ರಾಜ್ಯ ಸರ್ಕಾರವು ಅಡಳಿತ ಯಂತ್ರಕ್ಕೆ ವೇಗ ನೀಡುವ ಸಲುವಾಗಿ 7 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ. ವರ್ಗಾವಣೆಗೊಂಡ ಐಎಎಸ್ ಅಧಿಕಾರಿಗಳ ವಿವರ ಇಂತಿದೆ.

ರೋಹಿಣಿ ಸಿಂಧೂರಿ ದಾಸರಿ ಅವರನ್ನು ಕರ್ನಾಟಕ ಗೆಜೆಟಿಯರ್ ಇಲಾಖೆಯ ಮುಖ್ಯ ಸಂಪಾದಕರಾಗಿ ನೇಮಿಸಲಾಗಿದೆ. ಪ್ರದೀಪ್ ಪಿ., ಐಎಎಸ್ ಅವರನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಬೆಂಗಳೂರು ನಿರ್ದೇಶಕರಾಗಿ (ಸಾಮಾಜಿಕ ಲೆಕ್ಕಪರಿಶೋಧನೆ) ಪ್ರಸ್ತುತ ಖಾಲಿ ಇರುವ ಹುದ್ದೆಗೆ ನೇಮಕ ಮಾಡಲಾಗಿದೆ.ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿ ಸುರಳ್ಕರ್ ವಿಕಾಸ್ ಕಿಶೋರ್ ಅವರನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ರಾಜರಾಜೇಶ್ವರಿ ನಗರದ ವಲಯ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದೆ.

ಲತಾ ಕುಮಾರಿ ಕೆ.ಎಸ್., ಐಎಎಸ್ ಅವರನ್ನು ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಸಿ.ಎನ್.ಶ್ರೀಧರ, ಐಎಎಸ್ ಅವರನ್ನು ಜವಳಿ ಅಭಿವೃದ್ಧಿ ಆಯುಕ್ತರು ಮತ್ತು ಬೆಂಗಳೂರಿನ ಕೈಮಗ್ಗ ಮತ್ತು ಜವಳಿ ನಿರ್ದೇಶಕರಾಗಿ ಪ್ರಸ್ತುತ ಖಾಲಿ ಇರುವ ಹುದ್ದೆಗೆ ನಿಯೋಜಿಸಲಾಗಿದೆ.ಸಂಗಪ್ಪ, ಐಎಎಸ್ ಅವರನ್ನು ಕರ್ನಾಟಕ ರಾಜ್ಯ ಎಲೆಕ್ಟ್ರಾನಿಕ್ಸ್ ಡೆವಲಪ್ಮೆಂಟ್ ಕಾರ್ಪೊರೇಷನ್ ಲಿಮಿಟೆಡ್ (ಕಿಯೋನಿಕ್ಸ್) ವ್ಯವಸ್ಥಾಪಕ ನಿರ್ದೇಶಕರಾಗಿ ನೇಮಕ ಮಾಡಲಾಗಿದೆ.ಕರ್ನಾಟಕ ರಾಜ್ಯ ರೇಷ್ಮೆ ಸಂಶೋಧನಾ ಅಭಿವೃದ್ಧಿ ಸಂಸ್ಥೆ ಬೆಂಗಳೂರು ನಿರ್ದೇಶಕಿ ಶ್ರೀರೂಪ ಅವರನ್ನು ಕರ್ನಾಟಕ ರಾಜ್ಯ ಖನಿಜ ನಿಗಮ ನಿಯಮಿತ, ಬೆಂಗಳೂರು ಇದರ ಕಾರ್ಯನಿರ್ವಾಹಕ ನಿರ್ದೇಶಕರಾಗಿ ವರ್ಗಾವಣೆ ಮಾಡಲಾಗಿದೆ.


