Share this news

ಮುಂಬಯಿ : ಕನ್ನಡ ವಿಭಾಗ ಮುಂಬಯಿ ವಿಶ್ವವಿದ್ಯಾಲಯ ಆಯೋಜಿಸಿರುವ ಜಯ ಸಿ. ಸುವರ್ಣ ಸಂಸ್ಮರಣೆ, ಸಮಾರಂಭವು ಕಲೀನಾ ಕ್ಯಾಂಪಸ್‍ನ ಕವಿವರ್ಯ ಕುಸುಮಾಗ್ರಜ ಮರಾಠಿ ಭಾಷಾ ಭವನದಲ್ಲಿ ಸೆಪ್ಟೆಂಬರ್ 30ರಂದು ಮಧ್ಯಾಹ್ನ 2:30ಕ್ಕೆ ನಡೆಯಲಿದೆ.

ಅಂದು ಕನ್ನಡ ವಿಭಾಗ, ಮುಂಬಯಿ ವಿಶ್ವವಿದ್ಯಾಲಯದ 97ನೆಯ ಪ್ರಕಟಣೆಯಾಗಿ ಅನಿತಾ ಪಿ. ತಾಕೊಡೆಯವರು ಜಯ ಸುವರ್ಣರ ಜೀವನ ಸಾಧನೆಯ ಕುರಿತು ರಚಿಸಿದ ‘ಸುವರ್ಣಯುಗ’ ಕೃತಿ ಲೋಕಾರ್ಪಣೆ ಹಾಗೂ  ಸಾಧಕರಿಗೆ ಗೌರವಾರ್ಪಣೆ ಕಾರ್ಯಕ್ರಮ ನೆರವೇರಲಿದೆ.

ಮುಂಬಯಿ ವಿಶ್ವವಿದ್ಯಾಲಯ, ಕನ್ನಡ ವಿಭಾಗದ ಪ್ರಾಧ್ಯಾಪಕರು ಮತ್ತು ಮುಖ್ಯಸ್ಥರಾದ ಡಾ. ಜಿ. ಎನ್. ಉಪಾಧ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮವನ್ನು ಉತ್ತರ ಮುಂಬಯಿ ಲೋಕಸಭಾ ಕ್ಷೇತ್ರದ ಸಂಸದರಾದ ಗೋಪಾಲ ಸಿ. ಶೆಟ್ಟಿಯವರು ಉದ್ಘಾಟಿಸಲಿದ್ದಾರೆ.
ಕರ್ನಾಟಕ ಸರಕಾರದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಖಾತೆ ಸಚಿವರಾದ  ಮಧು ಬಂಗಾರಪ್ಪನವರು  ಕೃತಿಯನ್ನು ಲೋಕಾರ್ಪಣೆಗೊಳಿಸಲಿದ್ದಾರೆ.  ಕನ್ನಡ ವಿಭಾಗ, ಮುಂಬಯಿ ವಿಶ್ವವಿದ್ಯಾಲಯದ ಸಂದರ್ಶಕ ಪ್ರಾಧ್ಯಾಪಕರಾದ ಡಾ. ಉಮಾ ರಾಮರಾವ್ ಅವರು ಕೃತಿಯನ್ನು ಪರಿಚಯಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಹಿರಿಯ ಸಾಹಿತಿ ಡಾ. ವಿಶ್ವನಾಥ ಕಾರ್ನಾಡ್, ‘ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರ’ದ ಅಧ್ಯಕ್ಷರಾದ ಡಾ. ತುಕಾರಾಂ ಪೂಜಾರಿ, ‘ಸಾಯಿ ಪ್ಯಾಲೇಸ್ ಗ್ರೂಪ್ ಆಫ್ ಹೋಟೆಲ್ ಮುಂಬಯಿ’ ಇದರ ಆಡಳಿತ ನಿರ್ದೇಶಕರಾದ ರವಿ ಎಸ್. ಶೆಟ್ಟಿ ಇವರು ಪಾಲ್ಗೊಳ್ಳಲಿದ್ದಾರೆ. ಗೌರವಾನ್ವಿತ ಅತಿಥಿಗಳಾಗಿ ‘ಜಾಗತಿಕ ಬಂಟರ ಸಂಘಗಳ  ಒಕ್ಕೂಟ’ದ ಅಧ್ಯಕ್ಷರಾದ ಐಕಳ ಹರೀಶ ಶೆಟ್ಟಿ, ‘ಜಯ ಶ್ರೀಕೃಷ್ಣ ಪರಿಸರಪ್ರೇಮಿ ಸಮಿತಿ’ಯ ಸಂಸ್ಥಾಪಕರಾದ ತೋನ್ಸೆ ಜಯಕೃಷ್ಣ ಎ. ಶೆಟ್ಟಿ, ‘ವಿಶ್ವದೇವಾಡಿಗ ಮಹಾಮಂಡಲ’ದ ಅಧ್ಯಕ್ಷರಾದ ಧರ್ಮಪಾಲ ಯು. ದೇವಾಡಿಗ, ‘ರಾಷ್ಟ್ರೀಯ ಬಿಲ್ಲವ ಮಹಾಮಂಡಲ’ದ ಅಧ್ಯಕ್ಷರಾದ ಡಾ.ರಾಜಶೇಖರ ಕೋಟ್ಯಾನ್ ಇವರು ಭಾಗವಹಿಸಲಿದ್ದಾರೆ.
ಭಾರತ್ ಕೋ-ಆಪರೇಟಿವ್ ಬ್ಯಾಂಕಿನ ನಿರ್ದೇಶಕರಾದ ಸೂರ್ಯಕಾಂತ್ ಜಯ ಸುವರ್ಣ ಹಾಗೂ ಭಾಸ್ಕರ್ ಸಾಲಿಯನ್ ಇವರು ಉಪಸ್ಥಿತರಿರುವರು.

ಇದೇ ಸಂದರ್ಭದಲ್ಲಿ ಸಂಘಟಕರು, ಕರ್ನಾಟಕ ಸಂಘ ಡೊಂಬಿವಲಿ ಇದರ ಅಧ್ಯಕ್ಷರೂ ಆಗಿರುವ ದಿವಾಕರ ಶೆಟ್ಟಿ ಇಂದ್ರಾಳಿ ಮತ್ತು ಹೆಸರಾಂತ ನಿರೂಪಕರೂ ಸಾಹಿತಿ, ಕಲಾವಿದರೂ ಆಗಿರುವ ಅಶೋಕ ಪಕ್ಕಳ ಇವರನ್ನು ಗೌರವಿಸಲಾಗುವುದು. ಹಾಗೂ ಜಯಲೀಲಾ ಟ್ರಸ್ಟ್ ವತಿಯಿಂದ ಮುಂಬಯಿ ವಿಶ್ವವಿದ್ಯಾಲಯ ಕನ್ನಡ ವಿಭಾಗದ ಅರ್ಹ ಸಂಶೋಧನ ವಿದ್ಯಾರ್ಥಿಗಳಿಗೆ ಶಿಷ್ಯವೇತನವನ್ನು ನೀಡಲಾಗುವುದು. ಸಾಹಿತ್ಯ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸುವಂತೆ  ಕನ್ನಡ ವಿಭಾಗದ ಪ್ರಾಧ್ಯಾಪಕರು ಮತ್ತು ಮುಖ್ಯಸ್ಥರಾದ ಡಾ. ಜಿ. ಎನ್. ಉಪಾಧ್ಯ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

 

 

Leave a Reply

Your email address will not be published. Required fields are marked *