Share this news

ಬೆಂಗಳೂರು: ವಿಧಾನಸಭಾ ಚುನಾವಣೆಗೆ ಟಿಕೆಟ್​ ಕೊಡಿಸುವುದಾಗಿ ಹೇಳಿ ಉದ್ಯಮಿಯೊಬ್ಬರಿಂದ ಕೋಟ್ಯಾಂತರ ರೂ. ವಂಚನೆ ನಡೆಸಿರುವ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿ ಬಂಧನದಲ್ಲಿರುವ ಚೈತ್ರಾ ಅವರ ಹೆಸರಿನ ಜತೆಗೆ ‘ಕುಂದಾಪುರ’ ಹೆಸರನ್ನು ಬಳಸದಂತೆ ನಗರದ ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಲಯ ತಡೆಯಾಜ್ಞೆ ನೀಡಿದೆ.

ಸಾಮಾಜಿಕ ಜಾಲತಾಣ ಹಾಗೂ ಮಾದ್ಯಮಗಳಲ್ಲಿ ಚೈತ್ರಾ ಹೆಸರಿನೊಂದಿಗೆ ಕುಂದಾಪುರ ಹೆಸರು ತೆಗೆದುಹಾಕುವಂತೆ ಕೋರಿ ನ್ಯಾಯಾಲಯಕ್ಕೆ ಕುಂದಾಪುರ ಮೂಲದ ಉದ್ಯಮಿ, ಪ್ರಸ್ತುತ ಬೆಂಗಳೂರು ಹನುಮಂತ ನಗರದ ನಿವಾಸಿ ಗಣೇಶ್​ ಶೆಟ್ಟಿ ಅರ್ಜಿ ಸಲ್ಲಿಸಿದ್ದರು.ವಂಚನೆ ಪ್ರಕರಣದಲ್ಲಿ ಆರೋಪಿಯಾಗಿರುವ ಚೈತ್ರಾ ಅವರ ಸುದ್ದಿ ಪ್ರಸಾರ ಮಾಡುವಾಗ ಹೆಸರಿನ ಜೊತೆಗೆ ಕುಂದಾಪುರ ಹೆಸರನ್ನು ಬಳಸುವುದರಿಂದ ಕುಂದಾಪುರದ ಊರಿನ ಘನತೆಗೆ ಧಕ್ಕೆಯಾಗುತ್ತದೆ. ಈ ಒಂದು ಘಟನೆಯಿಂದ ಭವಿಷ್ಯದ ಪೀಳಿಗೆಯನ್ನು ಕೆಟ್ಟ ದೃಷ್ಟಿಯಿಂದ ನೋಡುವಂತಾಗಬಹುದು. ಕುಂದಾಪುರ ದೇವಾಲಯಗಳಿರುವ ಮತ್ತು ಪ್ರಕೃತಿ ಸೊಬಗಿನ ಊರು. ಈ ಊರಿನ ಹೆಸರು ಆರೋಪಿಯೊಬ್ಬರ ಹೆಸರಿನ ಕೊನೆಯ ಭಾಗವಾಗಿರುವ ಕಾರಣಕ್ಕೆ ಎಲ್ಲಿಯೂ ಉಲ್ಲೇಖವಾಗಬಾರದು ಎಂದು ಅರ್ಜಿಯಲ್ಲಿ ಕೋರಲಾಗಿತ್ತು.

ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚೈತ್ರಾ ಮತ್ತು ತಂಡದ ವಿಚಾರಣೆಯನ್ನು ಸಿಸಿಬಿ ಪೊಲೀಸರು ನಡೆಸುತ್ತಿದ್ದು ಈ ನಡುವೆ ಚೈತ್ರಾ ಪ್ರಕರಣದಲ್ಲಿ ಕುಂದಾಪುರ ಹೆಸರನ್ನು ಪದೇ ಪದೇ ಬಳಸುತ್ತಿರುವುದರಿಂದ ಇಲ್ಲಿನ ಸ್ಥಳೀಯರ ಭಾವನೆಗೆ ಧಕ್ಕೆಯಾಗುತ್ತಿರುವುದರಿಂದ ಮಾಧ್ಯಮಗಳಿಗೆ ಕುಂದಾಪುರ ಹೆಸರನ್ನು ಬಳಸದಂತೆ ನಿರ್ಬಂಧ ನೀಡುವಂತೆ ಕೋರ್ಟ್​ ಮೊರೆ ಹೋಗಿದ್ದರು. ಅದರಂತೆ ತಡೆಯಾಜ್ಞೆ ನೀಡಿ ಈ ಸಂಬಂಧ ವಿಚಾರಣೆಗೆ ಹಾಜರಾಗಲು ಎಲ್ಲರಿಗೂ ಸಮನ್ಸ್ ನೀಡಿದೆ.

 

Leave a Reply

Your email address will not be published. Required fields are marked *