Share this news

ಉಡುಪಿ: ರಾಜ್ಯಪಾಲರ ಜಿಲ್ಲಾ ಪ್ರವಾಸದ ಹಿನ್ನಲೆಯಲ್ಲಿ ಕಟ್ಟಡ ಸಾಮಾಗ್ರ ಸಾಗಾಟ ವಾಹನಗಳ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ನೂತನ ನಿಯಮ ಜಾರಿಗೊಳಿಸಿರುವುದನ್ನು ವಿರೋಧಿಸಿ ಅಕ್ಟೋಬರ್ 3 ರಂದು ಉಡುಪಿ ಜಿಲ್ಲಾ ಬಂದ್ ಗೆ ಕರೆ ನೀಡಿರುವುದನ್ನು ಹಿಂಪಡೆಯಲಾಗಿದೆ.

ಉಡುಪಿ ಜಿಲ್ಲೆಯಲ್ಲಿ ಪರವಾನಿಗೆ ರಹಿತ ಕಟ್ಟಡ ಸಾಮಗ್ರಿ ಸಾಗಾಟ ವಾಹನಗಳನ್ನು ಪೊಲೀಸರು ಮುಟ್ಟುಗೋಲು ಹಾಕಿ ದಂಡ ವಿಧಿಸಿ ಪ್ರಕರಣ ದಾಖಲಿಸುತ್ತಿರುವುದನ್ನು ವಿರೋಧಿಸಿ ಉಡುಪಿ ಜಿಲ್ಲಾ ಕಟ್ಟಡ ಸಾಮಗ್ರಿ ಸಾಗಾಟ ಲಾರಿ, ಟೆಂಪೋ ಮಾಲಕರ ಒಕ್ಕೂಟದ ನೇತೃತ್ವದಲ್ಲಿ ಉಡುಪಿ ಜಿಲ್ಲೆಯಾದ್ಯಂತ ಹಮ್ಮಿಕೊಂಡಿರುವ ಅನಿರ್ಧಿಷ್ಠಾವಧಿ ಮುಷ್ಕರವು ಮುಂದುವರೆದಿದೆ.

ಕಟ್ಟಡ ಸಾಮಾಗ್ರಿ ಸಾಗಾಟವನ್ನು ಸ್ಥಗಿತಗೊಳಿಸಿ ನೂರಾರು ಸಂಖ್ಯೆಯಲ್ಲಿ ಲಾರಿಗಳನ್ನು ಸಾಲಾಗಿ ನಿಲ್ಲಿಸಿ ಮುಷ್ಕರ ನಡೆಸಲಾಗುತ್ತಿದೆ. ಈ ನಡುವೆ ಬೇಡಿಕೆ ಈಡೇರದಿದ್ದರೆ ಅಕ್ಟೋಬರ್ 3ರಂದು ಉಡುಪಿ ಜಿಲ್ಲೆ ಬಂದ್ ಗೆ ಕರೆ ನೀಡಿದ್ದರು. ಆದರೆ ಜಿಲ್ಲೆಗೆ ರಾಜ್ಯಪಾಲರು ಆಗಮಿಸುವ ಹಿನ್ನೆಲೆಯಲ್ಲಿ ಮತ್ತು ಜನಸಾಮಾನ್ಯರಿಗೆ ತೊಂದರೆ ಆಗಬಾರದೆಂಬ ಹಿನ್ನಲೆಯಲ್ಲಿ ಉಡುಪಿ ಜಿಲ್ಲಾ ಬಂದ್ ನಿರ್ಧಾರವನ್ನು ಕೈಬಿಡಲಾಗಿದೆ.

 

 

 

 

 

Leave a Reply

Your email address will not be published. Required fields are marked *