ಕಾರ್ಕಳ : ಇಲ್ಲಿನ ಕ್ರಿಯೇಟಿವ್ ವಿದ್ಯಾಸಂಸ್ಥೆಯಲ್ಲಿ ದೇಶದ ಸ್ವಾತಂತ್ರ್ಯ ಹೋರಾಟದ ಮುಂಚೂಣಿ ನಾಯಕರಾದ ಲಾಲ್ ಬಹದ್ದೂರ್ ಶಾಸ್ತ್ರಿ ಹಾಗೂ ಮಹಾತ್ಮ ಗಾಂಧೀ ಜಯಂತಿಯನ್ನು ಆಚರಿಸಲಾಯಿತು.
ಕಾಲೇಜಿನ ಸಹ ಸಂಸ್ಥಾಪಕರಾದ ಗಣಪತಿ ಭಟ್ ಕೆ ಎಸ್ ಪುಷ್ಪನಮನ ಸಲ್ಲಿಸಿ ಮಾತನಾಡಿ, ದೇಶದ ಸ್ವಾತಂತ್ರ್ಯಕ್ಕಾಗಿ ಅನೇಕ ಮಹನೀಯರು ಅವಿರತ ಪರಿಶ್ರಮ ಪಟ್ಟಿದ್ದಾರೆ. ಜೈ ಜವಾನ್ ಜೈ ಕಿಸಾನ್ ಘೋಷಣೆಯ ಮೂಲಕ ಇಡೀ ರಾಷ್ರ್ಟದಲ್ಲಿ ಬದಲಾವಣೆ ತಂದ ಶಾಸ್ತ್ರಿಯವರ ಸರಳತೆ ಹಾಗೂ ಬ್ರಿಟೀಷರ ವಿರುದ್ದ ಅಹಿಂಸಾ ಮಾರ್ಗದಿಂದ ಸ್ವಾತಂತ್ರ್ಯ ಗಳಿಸುವ ಪರಿಕಲ್ಪನೆಯ ಮೂಲಕ ದೇಶದ ಜನರನ್ನು ಒಗ್ಗೂಡಿಸಿದ ಮಹಾತ್ಮ ಗಾಂಧೀಜಿಯವರ ಜೀವನವೇ ನಮಗೆಲ್ಲ ಮಾರ್ಗದರ್ಶನವಾಗಲಿ, ದಿನನಿತ್ಯದ ಬದುಕಿನಲ್ಲಿ ಸರಳತೆಯನ್ನು ಅಳವಡಿಸಿಕೊಳ್ಳೋಣ ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಕಾಲೇಜಿನ ಉಪನ್ಯಾಸಕ ವರ್ಗದವರು ಮತ್ತು ವಿದ್ಯಾರ್ಥಿಗಳಿಂದ ಶಾಸ್ತ್ರಿ-ಗಾಂಧೀಜಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ನಡೆಸಲಾಯಿತು.