ಕಾರ್ಕಳ:ದಲಿತ ಸಮುದಾಯದ ಅಪ್ರಾಪ್ತ ಬಾಲಕಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿರುವ ಪ್ರಕರಣದ ಕುರಿತಂತೆ ಕಾರ್ಕಳ ತಾಲೂಕಿನ ನಿಂಜೂರಿನ ಇಬ್ಬರು ಆರೋಪಿಗಳ ವಿರುದ್ಧ ಕಾರ್ಕಳ ನಗರ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.
ಆರೋಪಿ ಸುಜಿತ್ ಪೂಜಾರಿ ಎಂಬಾತ ಬಾಲಕಿ ಶಾಲೆಯಿಂದ ಮನೆಗೆ ಹೋಗುತ್ತಿದ್ದ ವೇಳೆ ತನ್ನ ಬೈಕಿನಲ್ಲಿ ನಿರ್ಜನ ಪ್ರದೇಶದಲ್ಲಿ ಆಕೆಗೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ನೊಂದ ಬಾಲಕಿಯ ಪೋಷಕರು ಪೊಲೀಸ್ ಠಾಣೆಗೆ ದೂರು ನೀಡಿದ್ದು,ಈ ಪ್ರಕರಣವನ್ನು ಹಿಂಪಡೆಯಬೇಕೆಂದು ಇನ್ನೋರ್ವ ಆರೋಪಿ ಅಭಿನಂದನ್ ಶೆಟ್ಟಿ ದೂರುದಾರರಿಗೆ ಮೊಬೈಲ್ ಕರೆ ಮಾಡಿ ಜೀವ ಬೆದರಿಕೆ ಹಾಕಿದ್ದು ,ಈ ಕುರಿತು ಕಾರ್ಕಳ ನಗರ ಠಾಣೆಯಲ್ಲಿ ಇಬ್ಬರು ಆರೋಪಿಗಳ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ.
ಪ್ರಕರಣ ದಾಖಲಾಗುತ್ತಿದ್ದಂತೆಯೇ ಆರೋಪಿಗಳು ತಲೆಮರೆಸಿಕೊಂಡಿದ್ದು,ಪೊಲೀಸರು ಆರೋಪಿಗಳ ಬಂಧನಕ್ಕೆ ಬಲೆಬೀಸಿದ್ದಾರೆ