ಹುಬ್ಬಳ್ಳಿ: ದೆಹಲಿ ಪೊಲೀಸರು ಬಂಧಿಸಿರುವ ಉಗ್ರರು ವಿಚಾರಣೆ ವೇಳೆ ಹುಬ್ಬಳ್ಳಿ-ಧಾರವಾಡ ಜಿಲ್ಲೆಯ ಹೆಸರನ್ನು ಬಾಯ್ಬಿಟ್ಟಿದ್ದಾರೆ. ಅಲ್ಲದೆ ಬಂಧಿತ ಉಗ್ರರು ಇಸ್ಲಾಮಿಕ್ ಸ್ಟೇಟ್ ಸಂಘಟನೆಯೊAದಿಗೆ ನಂಟು ಹೊಂದಿರುವುದನ್ನು ಪೊಲೀಸರು ಪತ್ತೆಹಚ್ಚಿದ್ದಾರೆ. ಬಂಧಿತರು ಹುಬ್ಬಳ್ಳಿ, ಧಾರವಾಡ, ಪಶ್ಚಿಮ ಘಟ್ಟಗಳಲ್ಲಿ ತರಬೇತಿ ಪಡೆದಿರುವುದಾಗಿ ಹೇಳಿದ್ದಾರೆ ಎಂದು ವರದಿಯಾಗಿದೆ. ದಕ್ಷಿಣ ಭಾರತದ ಹಲವು ಕಡೆ ತರಬೇಡಿ ಪಡೆದಿರುವ ಮಾಹಿತಿಯೂ ಲಭ್ಯವಾಗಿದೆ. ಅದಲ್ಲಿಯೂ ರಾಜ್ಯದ ಹುಬ್ಬಳ್ಳಿ ಮತ್ತು ಧಾರವಾಡದ ಹೆಸರುಗಳನ್ನು ಹೇಳಿರುವುದು ಆತಂಕಕ್ಕೆ ಕಾರಣವಾಗಿದೆ.
ಈ ಮುಂಚೆಯೂ ಹಲವು ಉಗ್ರರ ಪ್ರಕರಣಗಳು ಜಿಲ್ಲೆಯಲ್ಲಿ ನಡೆದಿವೆ. 2008ರಲ್ಲಿ ಸಿಮಿ ಸಂಘಟನೆ ಶಂಕಿತರು ಬಂಧಿತರಾಗಿದ್ದರು. ಸಿಮಿ ಉಗ್ರರೊಂದಿಗೆ ನಂಟು ಹೊಂದಿರುವ ಶಂಕೆ ವ್ಯಕ್ತವಾಗಿತ್ತು. ಜೊತೆಗೆ ಜಿಲ್ಲೆಯ ಕಲಘಟಗಿಯಲ್ಲಿ ಉಗ್ರರು ತರಬೇತಿ ಪಡೆಯುತ್ತಿದ್ದರು. ಆ ಮೂಲಕ ಹುಬ್ಬಳ್ಳಿ ಮತ್ತು ದಾವಣಗೆರೆಯಲ್ಲಿ ಭಯೋತ್ಪಾದನಾ ನಿಗ್ರಹ ಪೊಲೀಸರಿಂದ 17 ಜನರ ಬಂಧನ ಮಾಡಲಾಗಿತ್ತು. ಈ ವೇಳೆ ಸ್ಫೋಟಕ ವಸ್ತುಗಳು ಮತ್ತು ಜಿಹಾದಿ ಸಾಹಿತ್ಯ ವಶಕ್ಕೆ ಪಡೆಯಲಾಗಿತ್ತು. ಸೂಕ್ತ ಸಾಕ್ಷಾಧಾರ ಇಲ್ಲದ ಹಿನ್ನೆಲೆ 2015ರಲ್ಲಿ ಆರೋಪಮುಕ್ತರಾಗಿದ್ದರು.
ಇದೀಗ ದೆಹಲಿ ಪೊಲೀಸರಿಗೆ ಮೂವರು ಶಂಕಿತ ಉಗ್ರರು ಸೆರೆ ಸಿಕ್ಕಿದ್ದಾರೆ. ಹುಬ್ಬಳ್ಳಿ-ಧಾರವಾಡ ಸೇರಿ ಪಶ್ಚಿಮಘಟ್ಟದ ಕಾಡನ್ನು ಉಗ್ರರು ತರಬೇತಿಗೆ ಬಳಸಿಕೊಳ್ಳುವ ಉದ್ದೇಶ ಹೊಂದಿದ್ದರು ಎನ್ನಲಾಗಿದೆ. ಎನ್‌ಐಎ ಮೋಸ್ಟ್ ವಾಂಟೆಡ್ ಪಟ್ಟಿಯಲ್ಲಿದ್ದ ಶಂಕಿತ ಐಸಿಸ್ ಉಗ್ರ ಮೊಹಮ್ಮದ್ ಶಹನವಾಜ್?ಈ ಭಾಗದಲ್ಲಿ ತರಬೇತಿ ಕ್ಯಾಂಪ್ ಮಾಡಲು ಓಡಾಡಿರುವ ಮಾಹಿತಿ ನೀಡಲಾಗಿದೆ. ಆ ಮೂಲಕ ಇದೀಗ ಮತ್ತೆ ಬಂಧಿತ ಉಗ್ರರಿಂದ ಅವಳಿ ನಗರದ ಬಗ್ಗೆ ಪ್ರಸ್ತಾಪ ಮಾಡಲಾಗಿದೆ.