ಕಾರ್ಕಳ: ಕಾರ್ಕಳ ತಾಲೂಕು ಬೋಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಬರೆಬೈಲು ಎಂಬಲ್ಲಿ ರಬ್ಬರ್ ಸ್ಮೋಕ್ ಹೌಸ್ ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಮಾಹಿತಿ ಪಡೆದ ಕೂಡಲೇ ಅಗ್ನಿಶಾಮಕ ದಳ ಸ್ಥಳಕ್ಕೆ ದೌಡಾಯಿಸಿ ಬೆಂಕಿಯನ್ನು ನಂದಿಸಿದ್ದಾರೆ. ಆ ಮೂಲಕ ಹೆಚ್ಚಿನ ಅವಘಡವನ್ನು ತಪ್ಪಿಸಿದ್ದಾರೆ.
ಕಾರ್ಯಾಚರಣೆಯಲ್ಲಿ ಅಗ್ನಿಶಾಮಕ ಠಾಣಾಧಿಕಾರಿ ಬಿ.ಎಂ ಸಂಜೀವ್, ಸಿಬ್ಬಂದಿಗಳಾದ ಸುರೇಶ್, ಜಯಮೂಲ್ಯ ,ಕೇಶವ್ ,ಸುಜಯ್, ವಿನಾಯಕ್ ಪಾಲ್ಗೊಂಡಿದ್ದರು