ಕಾರ್ಕಳ: ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ಸೆ.27 ರಿಂದ ಸೆ.30 ರವರೆಗೆ ನಡೆದ ರಾಜ್ಯಮಟ್ಟದ ಅಥ್ಲೆಟಿಕ್ ಚಾಂಪಿಯನ್ ಶಿಪ್ ನಲ್ಲಿ ನಿಟ್ಟೆ ವಿದ್ಯಾರ್ಥಿಗಳು ವಿವಿಧ ಸ್ಥಾನಗಳನ್ನು ಪಡೆದಿದ್ದಾರೆ.
ಡಾ. ಎನ್.ಎಸ್.ಎ.ಎಂ. ಪಿಯು ಕಾಲೇಜಿನ ದ್ವಿತೀಯ ಪಿ.ಯು ಕಾಮರ್ಸ್ ವಿದ್ಯಾರ್ಥಿ ಕುಲದೀಪ್ ಕುಮಾರ್ 18 ವರ್ಷದೊಳಗಿನ ವಯೋಮಿತಿಯ ಜಾವೆಲಿನ್ ಥ್ರೋನಲ್ಲಿ ಚಿನ್ನದ ಪದಕವನ್ನು ಪಡೆದರು. ನಿಟ್ಟೆ ಎಂ.ಬಿ.ಎ ಕೋರ್ಸ್ ನ ದ್ವಿತೀಯ ವರ್ಷದ ವಿದ್ಯಾರ್ಥಿನಿ ವೀಕ್ಷಾ 23 ವರ್ಷದ ಒಳಗಿನ ವಯೋಮಿತಿಯ ವರ್ಗದ ಹ್ಯಾಮರ್ ಥ್ರೋನಲ್ಲಿ ಚಿನ್ನದ ಪದಕವನ್ನು ಪಡೆದರು.
ಡಾ.ಎನ್.ಎಸ್.ಎ.ಎಂ ಪ್ರಥಮದರ್ಜೆ ಕಾಲೇಜಿನ ದ್ವಿತೀಯ ಬಿ.ಕಾಂ ವಿದ್ಯಾರ್ಥಿನಿ ಪ್ರತೀಕ್ಷಾ 20 ವರ್ಷದೊಳಗಿನವರ 800 ಮೀಟರ್ ಓಟದಲ್ಲಿ ಬೆಳ್ಳಿ ಪದಕ ಗಳಿಸಿರುವರು.
ಡಾ. ಎನ್.ಎಸ್.ಎ.ಎಂ. ಪಿಯು ಕಾಲೇಜಿನ ದ್ವಿತೀಯ ಪಿ.ಯು ಕಾಮರ್ಸ್ ವಿದ್ಯಾರ್ಥಿನಿ ನಂದಿನಿ ಜಿ ಅವರು 18 ವರ್ಷದ ಒಳಗಿನ ವಯೋಮಿತಿಯ 3,000 ಮೀಟರ್ ಓಟದಲ್ಲಿ ಬೆಳ್ಳಿ ಪದಕ ಪಡೆದರು. ಡಾ.ಎನ್.ಎಸ್.ಎ.ಎಂ ಪ್ರೌಢಶಾಲೆಯ 8ನೇ ತರಗತಿ ವಿದ್ಯಾರ್ಥಿನಿ ರಶ್ಮಿತಾ 14 ವರ್ಷದೊಳಗಿನ ವಯೋಮಿತಿಯ ಹೈಜಂಪ್ ನಲ್ಲಿ ಬೆಳ್ಳಿ ಪದಕ ಪಡೆದರು.
23 ವರ್ಷದೊಳಗಿನವರ ಹ್ಯಾಮರ್ ಥ್ರೋನಲ್ಲಿ ನಿಟ್ಟೆ ತಾಂತ್ರಿಕ ಕಾಲೇಜಿನ ಶ್ರಿಯಾ ಶೆಟ್ಟಿ ಕಂಚಿನ ಪದಕವನ್ನು ಗಳಿಸಿದ್ದಾರೆ.
ಈ ಕ್ರೀಡಾಕೂಟದಲ್ಲಿ ಚಿನ್ನ, ಬೆಳ್ಳಿ ಮತ್ತು ಕಂಚಿನ ಪದಕ ಗಳಿಸಿದ ವಿಜೇತರು ಗುಂಟೂರಿನಲ್ಲಿ ಅಕ್ಟೋಬರ್ 14 ರಿಂದ 17 ರವರೆಗೆ ನಡೆಯಲಿರುವ ದಕ್ಷಿಣ ವಲಯ ಅಥ್ಲೆಟಿಕ್ ಚಾಂಪಿಯನ್ ಶಿಪ್ ನಲ್ಲಿ ಭಾಗವಹಿಸಲು ಅರ್ಹತೆ ಪಡೆದಿದ್ದಾರೆ