ಹೆಬ್ರಿ: ಹೆಬ್ರಿ ಪಾಂಡುರAಗ ರಮಣ ನಾಯಕ್ ಅಮೃತಭಾರತಿ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಮೈಸೂರು ವಿಭಾಗ ಮಟ್ಟದ ಯೋಗಾಸನ ಸ್ಪರ್ಧೆಯ ಉದ್ಘಾಟನಾ ಸಮಾರಂಭ ಭಾನುವಾರ ನಡೆಯಿತು.
ಈ ಕಾರ್ಯಕ್ರಮವನ್ನು ಹೆಬ್ರಿ ಗ್ರಾಮ ಪಂಚಾಯತ್ ಅಧ್ಯಕ್ಷ ತಾರಾನಾಥ.ಎಸ್. ಬಂಗೇರ ಉದ್ಘಾಟಿಸಿ ಮಾತನಾಡಿ ಯೋಗಾಸನದಿಂದ ಆರೋಗ್ಯ ವೃದ್ಧಿಯಾಗುತ್ತದೆ. ಈ ಕಾರ್ಯಕ್ರಮವನ್ನು ಉದ್ಘಾಟಿಸಲು ತುಂಬಾ ಸಂತೋಷ ಆಗುತ್ತದೆ. ಈ ಗ್ರಾಮದ ಪ್ರತಿಷ್ಠಿತ ಸಂಸ್ಥೆ ಅಮೃತ ಭಾರತಿ ತುಂಬಾ ವಿನೂತನವಾಗಿ ಇದನ್ನು ಆಯೋಜಿಸಿದ್ದು, ಎಲ್ಲಾ ಯೋಗಪಟುಗಳಿಗೆ ಶುಭವಾಗಲಿ ಎಂದು ಆಶಿಸಿದರು.
ಅಮೃತ ಭಾರತಿ ಟ್ರಸ್ಟ್ ನ ಅಧ್ಯಕ್ಷರಾದ ಸಿ ಎ. ಎಂ .ರವಿರಾವ್ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ, ಪ್ರತಿಯೊಬ್ಬ ವ್ಯಕ್ತಿಯಲ್ಲೂ ಸದಾಕಾಲ ಆರೋಗ್ಯ ಮತ್ತು ಪ್ರಸನ್ನತೆ ಇರಬೇಕಾದರೆ ಯೋಗ ಮಾಡಬೇಕು. ಯೋಗಾಸನ ಸ್ಪರ್ಧೆಯನ್ನು ನಮ್ಮ ಸಂಸ್ಥೆಯಲ್ಲಿ ಆಯೋಜಿಸಿದ್ದು ಸಂತಸವಾಗಿದೆ ಎಂದರು.
ಶಾಲಾ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆಯ ಉಪನಿರ್ದೇಶಕರಾದ ಗಣಪತಿ. ಕೆ. ಮಾತನಾಡಿ ಪಠ್ಯಕ್ರಮದ ಜೊತೆಗೆ ಸಹ ಪಠ್ಯಕ್ಕೂ ಸಮಾನ ಅವಕಾಶ ದೊರೆಯಬೇಕು. ಆಗ ವಿದ್ಯಾರ್ಥಿಗಳಿಗೆ ಆತ್ಮವಿಶ್ವಾಸ ಬರುತ್ತದೆ. ಯೋಗಾಸನದಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯ ಪಡೆಯಬಹುದು. ನಾವು ಅಂಕಾಧಾರಿತ ವ್ಯವಸ್ಥೆಯಲ್ಲಿ ಇದ್ದೇವೆ, ಇದರಿಂದ ವಿದ್ಯಾರ್ಥಿಗಳು ಮಾನಸಿಕ ಖಿನ್ನತೆಯನ್ನು ಅನುಭವಿಸುತ್ತಾರೆ ಆದರಿಂದ ಹೊರಬರಬೇಕು ಎಂದರು.
ಈ ಸಂದರ್ಭದಲ್ಲಿ ಕಾರ್ಕಳ ಕ್ಷೇತ್ರ ಶಿಕ್ಷಣಾಧಿಕಾರಿ ಭಾಸ್ಕರ್ ಟಿ, ಉಡುಪಿ ಕ್ಷೇತ್ರ ಶಿಕ್ಷಣಾಧಿಕಾರಿ ಅಶೋಕ್ ಕಾಮತ್, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಗೋಪಾಲ ಶೆಟ್ಟಿ, ತಾಲೂಕು ದೈಹಿಕ ಶಿಕ್ಷಣಾಧಿಕಾರಿ ರವಿಚಂದ್ರ ಕಾರಂತ, ಕುಂದಾಪುರ ದೈಹಿಕ ಶಿಕ್ಷಣ ಅಧಿಕಾರಿ ರವೀಂದ್ರ, ತಾಲ್ಲೂಕು ಪ್ರೌಢಶಾಲಾ ದೈಹಿಕ ಶಿಕ್ಷಣ ಸಂಘದ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ, ಪಾಂಡುರAಗ ಆಚಾರ್ಯ, ಸಹ ಶಿಕ್ಷಕರ ಸಂಘದ ಅಧ್ಯಕ್ಷ ಮಹೇಶ್, ಜಿಲ್ಲಾ ದೈಹಿಕ ಶಿಕ್ಷಕರ ಸಂಘದ ಕಾರ್ಯದರ್ಶಿ ಹರಿದಾಸ ಪ್ರಭು, ರಾಜ್ಯ ದೈಹಿಕ ಶಿಕ್ಷಕ ಸಂಘದ ಉಪಾಧ್ಯಕ್ಷ ರಾಜಾರಾಮ್ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು
ಅಮೃತಭಾರತಿ ಟ್ರಸ್ಟ್ ನ ಕಾರ್ಯದರ್ಶಿ ಗುರುದಾಸ್ ಶೆಣೈ ಸ್ವಾಗತಿಸಿದರು.