ಬೆಂಗಳೂರು : ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಎರ್ಲಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಉಮಿಕ್ಕಲ್ ಬೆಟ್ಟದಲ್ಲಿ ನ ಗೋಮಾಳ ಜಮೀನಿನಲ್ಲಿ ಪರಶುರಾಮ ಥೀಮ್ ಪಾರ್ಕ್ ನಿರ್ಮಾಣವಾಗಿದೆ ಹಾಗೂ ಈ ಯೋಜನೆಯಲ್ಲಿನ ಅಕ್ರಮಗಳ ತನಿಖೆಗೆ ಸಮಿತಿ ರಚನೆ ಮಾಡಬೇಕು ಎಂದು ಕೋರಿ ಪ್ರಮೋದ್ ಮುತಾಲಿಕ್ ಮತ್ತು ಇತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಈ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠ,ಅರ್ಜಿದಾರರು ಸಾಕಷ್ಟು ವಿಳಂಬವಾಗಿ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಅರ್ಜಿಯಲ್ಲಿನ ಎಲ್ಲಾ ಅಂಶಗಳು ಅರ್ಜಿದಾರರ ಕೇವಲ ಊಹೆಯಾಗಿದೆ,ಇದು ಅವರ ಸ್ವಂತ ಅಭಿಪ್ರಾಯವಾಗಿದೆ.ಆದ್ದರಿಂದ ಇದು ವಿಚಾರಣೆಗೆ ಪರಿಗಣಿಸದೇ ತಳ್ಳಿಹಾಕುವಂತಹ ಅರ್ಜಿ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.
ಗೋವುಗಳನ್ನು ಸಾಕದವರು, ಗೋಮಾಳ ರಕ್ಷಣೆ ಮಾಡುವಂತೆ ಕೋರಿ ಅರ್ಜಿ ಸಲ್ಲಿಸುವುದಕ್ಕೆ ಅವಕಾಶವಿಲ್ಲ, ಅರ್ಜಿದಾರರು ಗೋವುಗಳನ್ನು ಸಾಕಿದ್ದಾರೆಯೇ ಎಂದು ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರು ಅರ್ಜಿದಾರರನ್ನು ಮೌಖಿಕವಾಗಿ ಪ್ರಶ್ನಿಸಿ,ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಜಾಗೊಳಿಸಿದರು.