ಬೆಂಗಳುರು: ರಾಜ್ಯದಲ್ಲಿ ಪಡಿತರ ಚೀಟಿ ಹೊಂದಿರುವ ಹಿರಿಯ ನಾಗರಿಕರಿಗೆ (75 ವರ್ಷ ಮೇಲ್ಪಟ್ಟ) ಮನೆ ಬಾಗಲಿಗೆ ಆಹಾರ ಧಾನ್ಯಗಳನ್ನು ವಿತರಣೆ ಮಾಡಲು ಆಹಾರ ಇಲಾಖೆ ಸಿದ್ಧತೆ ನಡೆಸಿದೆ. ರಾಜ್ಯಕ್ಕೆ ಅಗತ್ಯವಿರುವ ಅಕ್ಕಿಯನ್ನು ಎಫ್ಸಿಐ ನಿಗದಿಪಡಿಸಿದ ದರದಲ್ಲಿ (ಪ್ರತಿ ಕೆ.ಜಿಗೆ 34) ಪೂರೈಸಲು ಛತ್ತೀಸಗಢ ಮತ್ತು ತೆಲಂಗಾಣ ರಾಜ್ಯ ಸರ್ಕಾರಗಳು ಒಪ್ಪಿಗೆ ಸೂಚಿಸಿವೆ. ಈ ತಿಂಗಳಿAದ ಅನ್ನ ಭಾಗ್ಯ ಯೋಜನೆಯಡಿ ಪೂರ್ಣ ಪ್ರಮಾಣದಲ್ಲಿ 10 ಅಕ್ಕಿ ಪೂರೈಸಲು ನಿರ್ಧರಿಸಿರುವ ಇಲಾಖೆ, ಪಡಿತರ ವಿತರಣೆಯಲ್ಲಿ ಹಿರಿಯ ನಾಗರಿಕರಿಗೆ ಅನುಕೂಲ ಮಾಡಿಕೊಡಲು ಮತ್ತೊಂದು ನಿರ್ಧಾರ ತೆಗೆದುಕೊಂಡಿದೆ.
ರಾಜ್ಯದಲ್ಲಿ ಈವರೆಗೆ ಪಡಿತರ ಕಾರ್ಡ್ (ಬಿಪಿಎಲ್ ಮತ್ತು ಎಪಿಎಲ್) ಹೊಂದಿರುವ ಕುಟುಂಬದ ಒಬ್ಬ ಸದಸ್ಯರು ತಮ್ಮ ವ್ಯಾಪ್ತಿಯ ನ್ಯಾಯಬೆಲೆ ಅಂಗಡಿಗೆ ತೆರಳಿ ಬಯೊಮೆಟ್ರಿಕ್ ನೀಡಿದ ನಂತರ ತಮ್ಮ ಕುಟುಂಬಕ್ಕೆ ನಿಗದಿಪಡಿಸಿದ ಅಕ್ಕಿ ಹಾಗೂ ಇತರೆ ಪಡಿತರ ಪಡೆಯುತ್ತಿದ್ದರು. ಆದರೆ, ವಯಸ್ಸಾದವರು ಪಡಿತರ ಕೇಂದ್ರಗಳಿಗೆ ಹೋಗಲು ಸಮಸ್ಯೆ ಅನುಭವಿಸುತ್ತಿದ್ದರು. ಹೀಗಾಗಿ, ಮನೆಯಲ್ಲಿ ಒಬ್ಬಂಟಿ ವೃದ್ಧರಿದ್ದರೆ ಅವರ ಮನೆ ಬಾಗಿಲಿಗೆ ಪಡಿತರ ವಿತರಣೆ ಮಾಡುವ ಯೋಜನೆ ರೂಪಿಸಲಾಗಿದೆ ಎಂದು ತಿಳಿದುಬಂದಿದೆ.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸುತ್ತಿರುವ ಮನೆ ಬಾಗಿಲಿಗೆ ಪಡಿತರ ಪಡೆಯಲು ಸಂಬAಧಪಟ್ಟ ಕುಟುಂಬದಲ್ಲಿ 75 ವರ್ಷದೊಳಗಿನ ಸದಸ್ಯರು ಇರಬಾರದು. ಒಂದು ವೇಳೆ 75 ವರ್ಷದೊಳಗಿನ ಸದಸ್ಯರಿದ್ದಲ್ಲಿ ಅವರೇ ವಿತರಣಾ ಕೇಂದ್ರಗಳಿಗೆ ಬಂದು ಪಡಿತರ ಪಡೆಯಬೇಕು. ಹೀಗಾಗಿ, ಸರ್ಕಾರದಿಂದ ಪಡಿತರ ಚೀಟಿ ಹೊಂದಿದ ಒಂಟಿ ವೃದ್ಧರು, 75 ದಾಟಿದ ದಂಪತಿಗಳ ಪ್ರತ್ಯೇಕ ಪಟ್ಟಿಯನ್ನು ಸಿದ್ಧಪಡಿಸಿದೆ. ಜೊತೆಗೆ, 75 ವರ್ಷದೊಳಗಿನ ಇತರೆ ಸದಸ್ಯರಿದ್ದರೂ ಅವರು ಕೆಲಸದ ನಿಮಿತ್ಯ ಬೇರೆ ಪ್ರದೇಶಗಳಿಗೆ ತೆರಳಿದ್ದರೆ, ಅಂತಹ ಸಮಯದಲ್ಲಿ ಊರಲ್ಲಿರುವ ವೃದ್ಧರ ಮನೆ ಬಾಗಿಲಿಗೇ ಪಡಿತರ ನೀಡಲು ಮುಂದಾಗಿದೆ














