ಕಾರ್ಕಳ:ಬೈಲೂರಿನ ಉಮಿಕಲ್ ಬೆಟ್ಟದ ಮೇಲೆ ನಿರ್ಮಾಣವಾಗಿರುವ ಪರಶುರಾಮ ಥೀಮ್ ಪಾರ್ಕಿನಲ್ಲಿ ಕಂಚಿನ ಪ್ರತಿಮೆ ನಿರ್ಮಾಣ ಮಾಡಿದ್ದೇವೆ ಎಂದು ಹೇಳಿ ನಕಲಿ ಪ್ರತಿಮೆ ನಿರ್ಮಿಸಿ ಜನರ ಧಾರ್ಮಿಕ ನಂಬಿಕೆ ದ್ರೋಹವೆಸಗಿದ ಶಾಸಕರಾದ ಸುನಿಲ್ ಕುಮಾರ್ ವಿರುದ್ದ ಕಾಂಗ್ರೆಸ್ ಪಕ್ಷದ ವತಿಯಿಂದ ನಾಳೆ (ಅ.16) ಸೋಮವಾರ ಬೆಳಿಗ್ಗೆ 10:30 ಥೀಮ್ ಪಾರ್ಕಿನಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದೆ.
ಸೋಮವಾರ ಬೆಳಗ್ಗೆ 10 ಗಂಟೆಗೆ ಕಾರ್ಕಳ ಪುಲ್ಕೇರಿ ಬೈಪಾಸ್ ವೃತ್ತದಿಂದ ವಾಹನದಲ್ಲಿ ಹೊರಟು ಪರಶುರಾಮ ಥೀಮ್ ಪಾರ್ಕ್ ತಲುಪಿ ಅಲ್ಲಿ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದ ರಾವ್ ತಿಳಿಸಿದ್ದಾರೆ