ಮೂಡಬಿದಿರೆ: ಮೂಡಬಿದ್ರಿ ಪ್ರೆಸ್ ಕ್ಲಬ್ ನ ಮಾಜಿ ಅಧ್ಯಕ್ಷರು ಹಾಗೂ ಯುವ ನ್ಯಾಯವಾದಿಯಾಗಿದ್ದ ಜಯಕಿರಣ ಪತ್ರಿಕೆಯ ವರದಿಗಾರ ವೇಣುಗೋಪಾಲ್ ಅವರು ಸೋಮವಾರ ಹೃದಯಾಘಾತದಿಂದ ನಿಧನರಾದರು.
ಕ್ರಿಯಾಶೀಲ ಪತ್ರಕರ್ತರಾಗಿದ್ದ ಅವರು ಪತ್ರಿಕಾ ಕ್ಷೇತ್ರ ಮಾತ್ರವಲ್ಲದೆ ಸಾಂಸ್ಕೃತಿಕ ಹಾಗೂ ಇನ್ನಿತರ ಕ್ಷೇತ್ರಗಳಲ್ಲೂ ತನ್ನನ್ನು ತೊಡಗಿಸಿಕೊಂಡಿದ್ದರು. ಸಚ್ಚೇರಿಪೇಟೆಯ ಆನಂದ ಪೂಜಾರಿ ಪುತ್ರರಾಗಿರುವ ವೇಣುಗೋಪಾಲ ಅವರು ಅವಿವಾಹಿತರಾಗಿದ್ದಾರೆ.
ಮೃತರ ನಿಧನಕ್ಕೆ ಮೂಡುಬಿದಿರೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಮೂಡುಬಿದಿರೆ ವಕೀಲರ ಸಂಘ ಮತ್ತು ಜಿಲ್ಲಾ ಪತ್ರಕರ್ತರ ಸಂಘ ಸಂತಾಪ ವ್ಯಕ್ತಪಡಿಸಿದೆ.