ಬೆಂಗಳೂರು: ಒಕ್ಕಲಿಗ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಸಾಹಿತಿ ಭಗವಾನ್ ಅವರನ್ನು ಸರ್ಕಾರ ತಕ್ಷಣ ಭಗವಾನ್ ಅವರನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳದಿದ್ದರೆ ತೀವ್ರ ಹೋರಾಟ ನಡೆಸಲಾಗುವುದು ಎಂದು ರಾಜ್ಯ ಒಕ್ಕಲಿಗರ ಸಂಘ ಎಚ್ಚರಿಕೆ ನೀಡಿದೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಡಿ.ಹನುಮಂತಯ್ಯ, ಪ್ರಚಾರಕ್ಕಾಗಿ ನೀಡಿರುವ ಹೇಳಿಕೆ ಬಗ್ಗೆ ಕೂಡಲೇ ಸಮುದಾಯದ ಕ್ಷಮೆ ಕೇಳಬೇಕು ಅಥವಾ ಸರ್ಕಾರ ಭಗವಾನ್ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ತೀವ್ರ ಹೋರಾಟ ನಡೆಸಲಾಗುವುದು.
ಬೆಂಗಳೂರು ನಿರ್ಮಾತೃ ಕೆಂಪೇಗೌಡರು, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಒಕ್ಕಲಿಗ ಸಮುದಾಯದವರೇ. ರಾಜ್ಯ ಸರ್ಕಾರ ಭಗವಾನ್ ವಿರುದ್ಧ ಕಾನೂನು ರೀತಿ ಕ್ರಮ ಕೈಗೊಳ್ಳದಿದ್ದರೆ ಸಂಘದ ಆಡಳಿತ ಮಂಡಳಿಯಲ್ಲಿ ಈ ಬಗ್ಗೆ ಚರ್ಚೆ ನಡೆಸಿ ಮುಂದಿ ತೀರ್ಮಾನ ಕೈಗೊಳ್ಳುತ್ತೇವೆ ಎಂದರು.