Share this news

ಮಂಗಳೂರು: ಇಲಾಖೆ ಜಾಗದಲ್ಲಿ ಕಟ್ಟಿಲು ಹೊರಟಿದ್ದ ಅಕ್ರಮ ಮನೆ ತೆರವಿಗೆ ಮುಂದಾಗಿದ್ದ ಅರಣ್ಯಾಧಿಕಾರಿಗಳ ಕೆಲಸಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಬೆಳ್ತಂಗಡಿಯ ಶಾಸಕ ಹರೀಶ್ ಪೂಂಜಾ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಲಯ ಅರಣ್ಯಾಧಿಕಾರಿಗಳನ್ನು ನಿಂದಿಸಿದ್ದು, ಬೆದರಿಕೆಯನ್ನು ಕೂಡ ಹಾಕಿದ್ದಾರಲ್ಲದೆ, ಅರಣ್ಯ ಇಲಾಖೆ ಅಧಿಕಾರಿಗಳು ಕರ್ತವ್ಯ ನಿರ್ವಹಿಸುತ್ತಿರುವಾಗ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಶಾಸಕ ಮತ್ತು 11 ಮಂದಿ ವಿರುದ್ಧ ಪ್ರಕರಣ ದಾಖಲಾಗಿದ್ದು, ಸರ್ಕಾರಿ ಅಧಿಕಾರಿಗಳಿಗೆ ಕರ್ತವ್ಯಕ್ಕೆ ಅಡ್ಡಿಪಡಿಸಿ ಬೆದರಿಕೆ ಹಾಕಿದ್ದಾರೆ ಎನ್ನುವ ಆರೋಪದಡಿ ದೂರು ನೀಡಲಾಗಿದೆ.

ಅರಣ್ಯ ಭೂಮಿಯ ಅತಿಕ್ರಮಣಕ್ಕೆ ಸಂಬAಧಿಸಿದAತೆ ವಿವಾದಕ್ಕೆ ಕಾರಣವಾಗಿದ್ದ ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಸರ್ವೆ ನಂಬರ್ 309 ರ ನಿಡ್ಲೆ ವಿಸ್ತೃತ ಬ್ಲಾಕ್ 2ರಲ್ಲಿ ಅಮ್ಮಿನಡ್ಕ -ಕೆದ್ದ ನಿವಾಸಿ ಲೋಲಾಕ್ಷ ಯಾನೆ ಅನಂತು ಅವರು ಅರಣ್ಯ ಇಲಾಖೆಯ ಜಾಗವನ್ನು ಒತ್ತುವರಿ ಮಾಡಿ ನೂತನ ಮನೆ ನಿರ್ಮಾಣಕ್ಕೆ ಮುಂದಾಗಿರುವ ಬಗ್ಗೆ ಮಂಗಳೂರು ಅರಣ್ಯ ಇಲಾಖೆಗೆ ದೂರು ಬಂದಿತ್ತು. ಈ ಹಿನ್ನೆಲೆ ಅ.6 ರಂದು ಅರಣ್ಯ ಇಲಾಖೆ ಸಿಬ್ಬಂದಿ ನೂತನ ಮನೆಯ ಫೌಂಡೇಶನ್ ತೆರವುಗೊಳಿಸಿದ್ದರು. ಘಟನೆ ವಿಚಾರ ತಿಳಿದು ಶಾಸಕ ಹರೀಶ್ ಪೂಂಜ ಅಕ್ಟೋಬರ್ 7 ರಂದು ಸ್ಥಳಕ್ಕೆ ಭೇಟಿ ನೀಡಿ ಅರಣ್ಯಧಿಕಾರಿಗಳಿಗೆ ಹಿಗ್ಗ ಮಗ್ಗವಾಗಿ ತರಾಟೆಗೆ ತೆಗೆದುಕೊಂಡಿದ್ದರು. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅನೇಕ ವಿಡಿಯೋಗಳು ಹರಿದಾಡಿದ್ದವು.

 

 

 

 

 

 

 

 

Leave a Reply

Your email address will not be published. Required fields are marked *