Share this news

ಬೆಂಗಳೂರು: ಅತ್ತಿಬೆಲೆ ಪಟಾಕಿ ದುರಂತ ಪ್ರಕರಣ ನಮಗೆ ಪಾಠ ಕಲಿಸಿದೆ. ಹಾಗಾಗಿ ರಾಜ್ಯಾದ್ಯಂತ ಪಟಾಕಿ ನಿಷೇಧಕ್ಕೆ ಚಿಂತನೆ ಮಾಡಲಾಗುವುದು ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಾಧಕ ಬಾಧಕ ಗಮನಿಸಿ ಕನಿಷ್ಠ ಬೆಂಗಳೂರಿನಲ್ಲಿ ಪಟಾಕಿ ಬ್ಯಾನ್ ಮಾಡಲು ಚಿಂತನೆ ಮಾಡಲಾಗುವುದು. ಇತ್ತೀಚೆಗೆ ಪಟಾಕಿ ಅವಘಡಗಳಲ್ಲಿ ಅಮಾಯಕರು ಮೃತಪಟ್ಟಿದ್ದಾರೆ. ದೆಹಲಿ ಮಾದರಿಯಲ್ಲಿ ರಾಜ್ಯದಲ್ಲಿ ಪಟಾಕಿ ಬ್ಯಾನ್‌ಗೆ ಚಿಂತನೆ ಮಾಡಲಾಗುವುದು ಎಂದು ಹೇಳಿದ್ದಾರೆ.

ಅತ್ತಿಬೆಲೆ ಪಟಾಕಿ ದುರಂತದಲ್ಲಿ 17 ಮಂದಿ ಸಾವು ವಿಷಾದನೀಯ. ಪಟಾಕಿ ಮಳಿಗೆ 2017 ರಿಂದ 2022 ವರೆಗೆ ನೂತನ ಪರವಾನಗಿ ನವೀಕರಣ ನಡುವೆ ಫೇಕ್ ಲೈಸೆನ್ಸ್ ಸೃಷ್ಟಿ ಮಾಡಲಾಗಿದೆ. ಕೇವಲ 1 ಸಾವಿರ ಕೆಜಿ ಪಟಾಕಿ ಮಾರಾಟಕ್ಕೆ ಪರವಾನಗಿ ನೀಡಲಾಗಿದೆ. ಆದರೆ 50 ಟನ್‌ಗೂ ಅಧಿಕ ಪಟಾಕಿ ಅಕ್ರಮವಾಗಿ ದಸ್ತಾನು ಮಾಡಲಾಗಿತ್ತು.
ಅಕ್ರಮ ದಸ್ತಾನು ಪರಿಶೀಲನೆ ವೇಳೆ ತಹಶಿಲ್ದಾರ್ ಸೇರಿದಂತೆ ಕಂದಾಯ ಅಧಿಕಾರಿಗಳು, ಪೊಲೀಸ್, ಪೈರ್ ಮತ್ತು ಟ್ರಾನ್ಸ್ಪೋರ್ಟ್ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದು, ಗಡಿಯಲ್ಲಿ ಆರ್ಟಿಓ ಅಧಿಕಾರಿಗಳು ಪರಿಶೀಲಿಸಿ ಕ್ರಮ ವಹಿಸಿಲ್ಲ. ಹಾಗಾಗಿ ತಹಶಿಲ್ದಾರ್ ಸೇರಿದಂತೆ ಹಲವು ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಅತ್ತಿಬೆಲೆ ಪಟಾಕಿ ಗೋಡೌನ್‌ನಲ್ಲಿ ಅಗ್ನಿ ದುರಂತ ನಡೆದ ಸ್ಥಳಕ್ಕೆ ಗೃಹ ಇಲಾಖೆ ಸಚಿವ ಪರಮೇಶ್ವರ್ ಇಂದು ಭೇಟಿ ಮಾಡಿದ್ದು, ಘಟನೆ ಅಗ್ನಿಶಾಮಕ ಡಿಐಜಿ ಪಂತ್, ಐಜಿಪಿ ರವಿಕಾಂತೇಗೌಡರಿAದ ಮಾಹಿತಿ ಪಡೆದುಕೊಂಡಿದ್ದಾರೆ. ದುರಂತದಲ್ಲಿ ಹದಿನಾಲ್ಕು ಮಂದಿ ಸಜೀವ ದಹನಗೊಂಡಿದ್ದರು. ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದರು. ನಾಲ್ವರ ಪೈಕಿ ಚಿಕಿತ್ಸೆ ಫಲಕಾರಿಯಾಗದೆ ಮೂವರು ಸಾವನ್ನಪ್ಪಿದರು. ಸೆಂಟ್ ಜಾನ್ಸ್ ಆಸ್ಪತ್ರೆಗೆ ಮೂವರು ಗಾಯಾಳುಗಳನ್ನ ರವಾನಿಸಲಾಗಿತ್ತು. ವಿಕ್ಟೋರಿಯಾ ಆಸ್ಪತ್ರೆಗೆ ಓರ್ವ ಗಾಯಾಳುವನ್ನ ರವಾನೆ ಮಾಡಲಾಗಿತ್ತು.

 

 

 

 

 

 

 

 

Leave a Reply

Your email address will not be published. Required fields are marked *