Share this news

ಬೆಂಗಳೂರು :ನವರಾತ್ರಿ ಹಾಗೂ ದಸರಾ ಹಬ್ಬದ ಪ್ರಯುಕ್ತ ನಡೆಯುವ ಆಯುಧಪೂಜೆಗೆ ವಿಧಾನಸೌಧ ಹಾಗೂ ವಿಕಾಸಸೌಧಗಳಲ್ಲಿ ಅರಿಶಿನ ಕುಂಕುಮ ಬಳಸದಂತೆ ಸರ್ಕಾರ ಸುತ್ತೋಲೆ ಹೊರಡಿಸಿದೆ.

ಈ ಕುರಿತು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದು, ಸರ್ಕಾರದ ಈ ಆದೇಶ ಹೊಸತೇನಲ್ಲ, ಆಯುಧಪೂಜೆ ಸಂದರ್ಭದಲ್ಲಿ ವಿಧಾನಸೌಧ, ವಿಕಾಸಸೌಧ ಸೇರಿದಂತೆ ಬಹುಮಹಡಿ ಕಟ್ಟಡಗಳಲ್ಲಿ ಅರಿಶಿನ-ಕುಂಕುಮ ಸೇರಿದಂತೆ ರಾಸಾಯನಿಕಯುಕ್ತ ಬಣ್ಣಗಳನ್ನು ಬಳಸುವುದರಿಂದ ನೆಲಹಾಸಿನ ಮೇಲೆ ಬಿದ್ದು, ಅವುಗಳ ಕಲೆ ಶಾಶ್ವತವಾಗಿ ಅಥವಾ ಬಹುಕಾಲ ಉಳಿಯುವುದರಿಂದ ಇದರಿಂದಾಗುವ ಹಾನಿ ತಪ್ಪಿಸಲು ಹಾಗೂ ಕಟ್ಟಡಗಳಿಗೆ ಹಾನಿ ತಪ್ಪಿಸಲು ಈ ಹಿಂದಿನ ಸರ್ಕಾರಗಳು ಪಾಲಿಸಿಕೊಂಡು ಬಂದಿದ್ದ ಸಂಪ್ರದಾಯವನ್ನೇ ನಾವು ಪಾಲಿಸಿದ್ದೇವೆ ಎಂದು ಹೇಳಿದ್ದಾರೆ.
ಆದರೆ ಈ ವಿಚಾರವಾಗಿ ಸರ್ಕಾರದ ವಿರುದ್ಧ ನಡೆಸಲಾಗುತ್ತಿರುವ ಅಪಪ್ರಚಾರಕ್ಕೆ ಯಾರೂ ಕಿವಿಗೊಡಬಾರದು ಎಂದು ಮನವಿ ಮಾಡುತ್ತೇನೆ ಎಂದು ಸಿಎಂ ಹೇಳಿದ್ದಾರೆ.

 

 

 

 

 

 

 

 

Leave a Reply

Your email address will not be published. Required fields are marked *