Share this news

ಬೆಂಗಳೂರು: ರಾಜ್ಯದಲ್ಲಿ ಆದಾಯ ಮೀರಿ ಅಕ್ರಮ ಆಸ್ತಿ ಗಳಿಕೆ ಮಾಡಿದ ಪ್ರಕರಣದ ಸಿಬಿಐ ತನಿಖೆಗೆ ತಡೆ ನೀಡುವಂತೆ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಡಿ.ಕೆ. ಶಿವಕುಮಾರ್ ಅವರು ಹೈಕೋರ್ಟ್ ಮೊರೆ ಹೋಗಿದ್ದರು. ಚುನಾವಣೆ ಸಂದರ್ಭದಲ್ಲಿ ಪ್ರಕರಣ ತನಿಖೆಗೆ ತಡೆ ನೀಡಿದ್ದ ಹೈಕೋರ್ಟ್ ಈಗ ಪುನಃ ತನಿಖೆ ಪುನಾರಂಭಿಸುವAತೆ ಆದೇಶ ಹೊರಡಿಸಿದೆ.

ಡಿ.ಕೆ. ಶಿವಕುಮಾರ್ ಅವರು 200 ಕೋಟಿ ರೂ. ಅಕ್ರಮ ಆಸ್ತಿ ಗಳಿಕೆ ಸಂಬಧಪಟ್ಟAತೆ ಸಿಬಿಐ ಎಫ್‌ಐಆರ್ ರದ್ದುಗೊಳಿಸುವಂತೆ ಕೋರಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಜೊತೆಗೆ, ಈ ಹಿಂದೆ ಕರ್ನಾಟಕ ವಿಧಾನಸಭಾ ಚುನಾವಣೆಯಯ ಹಿನ್ನೆಲೆಯಲ್ಲಿ ಪ್ರಚಾರ ಕಾರ್ಯಗಳಲ್ಲಿ ತೊಡಗಲು ಅನುಕೂಲ ಆಗುವಂತೆ ಸಿಬಿಐ ತನಿಖೆಗೆ ಮಧ್ಯಂತರ ತಡೆಯನ್ನು ನೀಡಿತ್ತು. ಈಗ ತನಿಖೆಗೆ ನೀಡಿದ್ದ ಮಧ್ಯಂತರ ತಡೆಯನ್ನು ಕೂಡ ಹೈಕೋರ್ಟ್ ತೆರವು ಮಾಡಿದೆ.

014ರಿಂದ 2018 ರವರೆಗೆ ಸುಮಾರು 75 ಕೋಟಿ ಅಕ್ರಮ ಆಸ್ತಿ ಗಳಿಕೆ ಆರೋಪ ಎದುರಾಗಿತ್ತು. ಈ ತನಿಖೆ ವೇಳೆ ಸಿಬಿಐ 200 ಕೋಟಿ ರೂ. ಅಧಿಕ ಅಕ್ರಮ ಆಸ್ತಿ ಪತ್ತೆ ಹಚ್ಚಿತ್ತು. ಸಿಬಿಐ ವಾದಕ್ಕೆ ಮನ್ನಣೆ ನೀಡಿ ಡಿ.ಕೆ. ಶಿವಕುಮಾರ್ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಲಾಗಿದೆ. ಈಗ ಅರ್ಧಕ್ಕೆ ನಿಂತಿದ್ದ ತನಿಖೆಯನ್ನು ಸಿಬಿಐ ಮುಂದುವರೆಸಲಿದೆ. ತನಿಖೆ ಅಂತಿಮ ಹಂತಕ್ಕೆ ಬಂದಿದ್ದು ಸದ್ಯದಲ್ಲೆ ಚಾರ್ಜ್ ಶೀಟ್ ಸಲ್ಲಿಸುವ ಸಾಧ್ಯತೆಯಿದೆ.

 

 

 

 

 

 

 

 

Leave a Reply

Your email address will not be published. Required fields are marked *