Share this news

ಶ್ರೀಹರಿಕೋಟಾ :  ಇಸ್ರೋದ ಮಹತ್ವಾಕಾಂಕ್ಷಿ ಗಗನಯಾನಕ್ಕೆ ಸಂಬಂಧಿಸಿದಂತೆ ಮೊದಲ ಬಾರಿಗೆ ಮಾನವ ರಹಿತ ಪರೀಕ್ಷಾ ವಾಹನದ ಉಡಾವಣೆ ಯಶಸ್ವಿಯಾಗಿ ನಡೆದಿದೆ. ಶನಿವಾರ ಬೆಳಗ್ಗೆ 8 ಗಂಟೆಗೆ ಉಡಾವಣೆಯಾಗಬೇಕಿದ್ದ, ಬಳಿಕ ಕೆಲ ಕಾಲ ಮುಂದೂಡಿಕೆಯಾಗಿದ್ದ ಇಸ್ರೋದ ಗಗನಯಾನ ಮಿಷನ್‌ ಲಾಂಛ್‌ ಬೆಳಗ್ಗೆ 10 ಗಂಟೆಗೆ ಯಶಸ್ವಿಯಾಗಿದೆ.

ಇಸ್ರೋದ ಮಹತ್ವಾಕಾಂಕ್ಷಿ ಗಗನಯಾನಕ್ಕೆ ಸಂಬಂಧಿಸಿದಂತೆ ಮೊದಲ ಬಾರಿಗೆ ಮಾನವ ರಹಿತ ಪರೀಕ್ಷಾ ವಾಹನದ ಉಡಾವಣೆ ಯಶಸ್ವಿಯಾಗಿ ನಡೆದಿದೆ. ರಾಕೆಟ್​​ನಿಂದ ಬೇರ್ಪಟ್ಟು ಕ್ರ್ಯೂ ಮಾಡೆಲ್ ಮತ್ತು ಕ್ರ್ಯೂ ಎಸ್ಕೇಪ್​ ಮಾಡೆಲ್​ಗಳು ಪ್ಯಾರಚೂಟ್ ಮೂಲಕ ಯಶಸ್ವಿಯಾಗಿ ಭೂಮಿಗೆ ಬಂದಿಳಿದಿವೆ. ವಿಜ್ಞಾನಿಗಳ ತಂಡದ ಶ್ರಮದಿಂದ ನೌಕೆ ಪ್ರಯೋಗ ಯಶಸ್ವಿಯಾಗಿದೆ. ಹೀಗಾಗಿ ವಿಜ್ಞಾನಿಗಳಿಗೆ ಇಸ್ರೋ ಮುಖ್ಯಸ್ಥ ಸೋಮನಾಥ್​​​​ ಅಭಿನಂದನೆ ಸಲ್ಲಿಸಿದರು.

ಶನಿವಾರ ಬೆಳಗ್ಗೆ ಸತೀಶ್‌ ಧವನ್‌ ಉಡಾವಣಾ ಕೇಂದ್ರದಲ್ಲಿರುವ ಒಂದನೇ ಲಾಂಚ್‌ ಪ್ಯಾಡ್‌ನಿಂದ ಈ ಪರೀಕ್ಷೆಗಾಗಿಯೇ ತಯಾರಿಸಲಾಗಿರುವ ರಾಕೆಟ್‌, ಗಗನಯಾನ ನೌಕೆಯ ಮಾಡೆಲನ್ನು ಹೊತ್ತು ಉಡಾವಣೆಯಾಗಿದೆ. 1 ನಿಮಿಷದ ಬಳಿಕ 11.7 ಕಿ.ಮೀ. ಎತ್ತರಕ್ಕೆ ಸಾಗುವ ರಾಕೆಟ್‌ ನೌಕೆಯಿಂದ ಬೇರ್ಪಟ್ಟಿದೆ. ಒಂದೂವರೆ ನಿಮಿಷಕ್ಕೆ 16 ಕಿ.ಮೀ. ಎತ್ತರಕ್ಕೆ ತಲುಪುವ ಗಗನಯಾನ ಕ್ರ್ಯೂ ಮಾಡ್ಯೂಲ್‌ ಇದಾದ ಬಳಿಕ ಮೇಲ್ಭಾಗದಲ್ಲಿ ಅಳವಡಿಸಲಾಗಿರುವ ಬೂಸ್ಟರ್‌ನಿಂದಲೂ ಬೇರ್ಪಟ್ಟು ಭೂಮಿಯತ್ತ ಬೀಳಲು ಆರಂಭಿಸುತ್ತದೆ.

ಈ ಹಂತದಲ್ಲಿ ಗಗನಯಾನ ನೌಕೆ ಮತ್ತು ಸಿಬ್ಬಂದಿಗಳನ್ನು ರಕ್ಷಿಸಲು ಇರುವ ಉಪಕರಣ ಎರಡೂ ಪ್ರತ್ಯೇಕಗೊಂಡು ಸಮುದ್ರದತ್ತ ಧಾವಿಸಿದೆ. ಹೀಗೆ ರಾಕೆಟ್‌ನಿಂದ ಬೇರ್ಪಟ್ಟ 5 ಸೆಕೆಂಡ್‌ ಬಳಿಕ ನೌಕೆಯಲ್ಲಿರುವ ಪ್ಯಾರಾಚೂಟ್‌ ಬಿಚ್ಚಿಕೊಂಡಿದ್ದು, ನೌಕೆಯ ವೇಗವನ್ನು ನಿಯಂತ್ರಿಸಿ ಭೂಮಿಯತ್ತ ತರಲಿದೆ. 3 ನಿಮಿಷಗಳ ಕಾಲ ಈ ಪ್ಯಾರಾಚೂಟ್‌ನ ಸಹಾಯದಿಂದ ನೌಕೆ ಇಳಿದಿದೆ. ಬಳಿಕ ಮತ್ತೊಂದು ಶಕ್ತಿಶಾಲಿ ಪ್ಯಾರಾಚೂಟ್‌ ತೆರೆದುಕೊಂಡಿದ್ದು, ನೌಕೆಯನ್ನು ಸುರಕ್ಷಿತವಾಗಿ ಸಮುದ್ರಕ್ಕೆ ಇಳಿದಿದೆ.

 

 

 

 

 

 

 

 

Leave a Reply

Your email address will not be published. Required fields are marked *