ಬೆಂಗಳೂರು:ಆಸಿಡ್ ದಾಳಿಯಿಂದ ಸಂತ್ತಸ್ಥರಾದ ಮಹಿಳೆಯರಿಗೆ ನೀಡಲಾಗುವ ಬಡ್ಡಿರಹಿತ ಸಾಲ 5 ಲಕ್ಷ ರೂಗೆ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಈ ಕುರಿತು ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದ್ದು, ನಾಡಿನ ಮಹಿಳೆಯರು ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ವಲಯದಲ್ಲಿ ಮುಕ್ತವಾಗಿ ಭಾಗವಹಿಸುವ ಅವಕಾಶ ಮತ್ತು ಸುರಕ್ಷಿತ ವಾತಾವರಣವನ್ನು ಒದಗಿಸಲು ನಮ್ಮ ಸರ್ಕಾರವು ಬದ್ಧವಾಗಿದೆ.
ಮಹಿಳೆಯರ ಸುರಕ್ಷತೆಗಾಗಿ 6 ನೂತನ ಮಹಿಳಾ ಪೊಲೀಸ್ ಠಾಣೆಗಳನ್ನು ಸ್ಥಾಪಿಸುವ ಮತ್ತು ಆಸಿಡ್ ದಾಳಿ ಸಂತ್ರಸ್ತ ಮಹಿಳೆಯರಿಗೆ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ ಸ್ವಯಂ ಉದ್ಯೋಗ ಕೈಗೊಳ್ಳಲು ರೂ. 5 ಲಕ್ಷದ ವರೆಗೆ ಬಡ್ಡಿ ರಹಿತ ಸಾಲ ಸೌಲಭ್ಯ ಹಾಗೂ ರಾಜೀವ್ ಗಾಂಧಿ ವಸತಿ ನಿಗಮದ ಮೂಲಕ ವಸತಿ ಸೌಲಭ್ಯ ಕಲ್ಪಿಸುವುದಾಗಿ ಪ್ರಸಕ್ತ ಸಾಲಿನ ಬಜೆಟ್ನಲ್ಲಿ ಘೋಷಿಸುವ ಮೂಲಕ ಮಹಿಳಾ ಕಲ್ಯಾಣ ಕಾರ್ಯಕ್ರಮಗಳಿಗೆ ನಮ್ಮ ಆದ್ಯತೆ ನೀಡಿದೆ ಎಂದರು.
ಸ್ತ್ರೀಶಕ್ತಿ ಆರಾಧನೆಯ ಈ ನವರಾತ್ರಿ ಹಬ್ಬದ ಸಂದರ್ಭದಲ್ಲಿ ನಮ್ಮ ಸರ್ಕಾರವು ಸ್ತ್ರೀಸಬಲೀಕರಣಕ್ಕೆ ಬದ್ಧವಾಗಿ ಶ್ರಮಿಸುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು