ಕಾರ್ಕಳ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಮನೆಗೆ ಬೆಂಕಿ ಹೊತ್ತಿಕೊಂಡು ಚಿನ್ನಾಭರಣ,ನಗದು, ಬಟ್ಟೆಬರೆಗಳು ಸೇರಿ ಲಕ್ಷಾಂತರ ರೂ ಮೌಲ್ಯದ ಸೊತ್ತುಗಳು ಅಗ್ನಿಗಾಕುತಿಯಾಗಿದೆ.
ಕಾರ್ಕಳ ತಾಲೂಕಿನ ಕಡ್ತಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಕ್ಕುಜೆ ಇಸರಮಾರ್ ಗುಲಾಬಿ ಶೆಟ್ಟಿ ಎಂಬವರ ಮನೆಗೆ ಮಂಗಳವಾರ ಮಧ್ಯಾಹ್ನ ಬೆಂಕಿ ತಗುಲಿ ಈ ದುರ್ಘಟನೆ ಸಂಭವಿಸಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಏಕಾಎಕಿ ಹೊತ್ತಿಕೊಂಡ ಬೆಂಕಿ ನಿಧಾನವಾಗಿ ಮನೆಗೆ ವ್ಯಾಪಿಸಿದೆ. ಮನೆಯಲ್ಲಿ ಯಾರೂ ಇಲ್ಲದ ಕಾರಣದಿಂದ ಬೆಂಕಿ ತಗುಲಿದ ವಿಚಾರ ಗಮನಕ್ಕೆ ಬಂದಿಲ್ಲ. ಬಳಿಕ ಸುತ್ತಮುತ್ತಲಿನವರು ಮನೆಯೊಳಗಿನಿಂದ ದಟ್ಟಹೊಗೆ ಬರುತ್ತಿರುವುದನ್ನು ಗಮನಿಸಿ ತಕ್ಷಣವೇ ಮನೆಗೆ ಮಂದಿಗೆ ತಿಳಿಸಿ ಅಗ್ನಿಶಾಮಕ ದಳಕ್ಕೆ ಕರೆ ಮಾಡಿದ್ದಾರೆ.
ಅಗ್ನಿಶಾಮಕ ದಳದ ಠಾಣಾಧಿಕಾರಿ ಅಲ್ಬರ್ಟ್ ಮೋನಿಸ್ ನೇತೃತ್ವದ ತಂಡ ಘಟನಾ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿ ಭಾರೀ ಹಾನಿ ತಪ್ಪಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಅಚ್ಯುತ ಕರ್ಕೇರಾ,ರೂಪೇಶ್ ಇಡುರಕರ್,ಜಯ ಮೂಲ್ಯ,ಸುಜಯ್ ಹಾಗೂ ವಿನಾಯಕ್ ಪಾಲ್ಗೊಂಡಿದ್ದರು




