Share this news

ಚಿಕ್ಕಮಗಳೂರು:ಶ್ರೀರಾಮಸೇನೆ ಅ.30 ರಿಂದ ಒಂದು ವಾರಗಳ ಕಾಲ ರಾಜ್ಯಾದ್ಯಂತ ದತ್ತಮಾಲಾ ಅಭಿಯಾನ ಹಮ್ಮಿಕೊಂಡಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ನವೆಂಬರ್ 4ರಿಂದ ಮೂರು ದಿನ ಮುಳ್ಳಯ್ಯನಗಿರಿ, ದತ್ತಪೀಠ ಭಾಗಕ್ಕೆ ಪ್ರವಾಸಿಗರ ಭೇಟಿ ನಿರ್ಬಂಧಿಸಿ ಚಿಕ್ಕಮಗಳೂರು ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ಚಿಕ್ಕಮಗಳೂರು ತಾಲೂಕಿನ ದತ್ತಾತ್ರೇಯ ಬಾಬಾಬುಡನ್ ಗಿರಿ, ದತ್ತಪೀಠ, ಸೀತಾಳಯ್ಯನಗಿರಿ, ಮುಳ್ಳಯ್ಯನಗಿರಿ, ಹೊನ್ನಮ್ಮನಹಳ್ಳ, ಮಾಣಿಕ್ಯಾಧಾರ, ಗಾಳಿಕೆರೆಗೆ ನವೆಂಬರ್ 4 ರ ಬೆಳಗ್ಗೆ 6ರಿಂದ ನವೆಂಬರ್ 6ರ ಬೆಳಗ್ಗೆ 10 ಗಂಟೆಯವರೆಗೆ ಪ್ರವೇಶ ನಿಷೇಧಿಸಲಾಗಿದೆ.
ಅ.30 ರಂದು ರಾಜ್ಯಾದ್ಯಂತ ದತ್ತ ಭಕ್ತರು ದತ್ತಮಾಲೆ ಧರಿಸಲಿದ್ದು, ಅದೇದಿನ ಚಿಕ್ಕಮಗಳೂರಿನ ಶಂಕರಮಠದಲ್ಲಿ ಮಾಲಾಧಾರಣೆ ನಡೆಯಲಿದೆ. ನ.2 ರಂದು ದತ್ತ ದೀಪೋತ್ಸವ, ನ.4 ರಂದು ಪಡಿ ಸಂಗ್ರಹ, ನ.5 ರಂದು ಶೋಭಾಯಾತ್ರೆ ನಡೆಯಲಿದೆ. ಬಳಿಕ ಇದೇ ಸ್ಥಳದಲ್ಲಿ ಧರ್ಮಸಭೆ ನಡೆಸಿ ದತ್ತಪೀಠಕ್ಕೆ ತೆರಳಿ, ದತ್ತಪಾದುಕೆಗಳ ದರ್ಶನ ಪಡೆದ ನಂತರ ಹೋಮ ಹವನ ಹಾಗೂ ಪ್ರಸಾದ ವಿನಿಯೋಗ ನಡೆಯಲಿದೆ ಎಂದು ಶ್ರೀರಾಮ ಸೇನೆ ರಾಜ್ಯಾಧ್ಯಕ್ಷ ಗಂಗಾಧರ ಕುಲಕರ್ಣಿ ತಿಳಿಸಿದ್ದಾರೆ.

 

 

 

 

 

 

 

 

Leave a Reply

Your email address will not be published. Required fields are marked *