Share this news

ಬೆಂಗಳೂರು: ಸ್ಯಾಂಡಲ್‌ವುಡ್‌ ನಟ ಹಾಗೂ ರಾಜ್ಯಭಾ ಸದಸ್ಯ ಜಗ್ಗೇಶ್‌ ಅವರು ಹುಲಿ ಉಗುರು ಧರಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಅರಣ್ಯಾಧಿಕಾರಿಗಳಿಂದ ನೋಟಿಸ್‌ ನೀಡಲಾಗಿತ್ತು. ಈ ನೋಟಿಸ್‌ ರದ್ದುಗೊಳಿಸುವಂತೆ ಜಗ್ಗೇಶ್‌ ಹೈಕೋರ್ಟ್‌ ಮೊರೆ ಹೋಗಿದ್ದು, ವಿಚಾರಣೆ ನಡೆಸಿದ ನ್ಯಾಯಾಲಯ ಅರಣ್ಯಾಧಿಕಾರಿಗಳ ನೋಟಿಸ್‌ಗೆ ತಡೆಯನ್ನು ನೀಡಿದೆ.

ರಾಜ್ಯದಲ್ಲಿ ಬಿಗ್‌ಬಾಸ್‌ ಸ್ಪರ್ಧಿ ವರ್ತೂರು ಸಂತೋಷ್‌ ಅವರು ಹುಲಿ ಉಗುರಿನ ಪೆಂಡೆಂಟ್‌ ಅನ್ನು ಕಾನೂನು ಬಾಹಿರವಾಗಿ ಧರಿಸಿದ್ದಾರೆ ಎಂಬ ಅಪರಾಧದ ಹಿನ್ನೆಲೆಯಲ್ಲಿ ಅರಣ್ಯಾಧಿಕಾರಿಗಳು ಬಿಗ್‌ಬಾಸ್‌ ಮನೆಯಿಂದಲೇ ಸಂತೋಷ್‌ ಅವರನ್ನು ಬಂಧಿಸಿ ಕರೆದೊಯ್ದಿದ್ದರು. ಇದರ ಬೆನ್ನಲ್ಲಿಯೇ ರಾಜ್ಯದ ಜನತೆಯಿಂದ ಹುಲಿ ಉಗುರು ಧರಿಸಿದ ಸ್ಯಾಂಡಲ್‌ವುಡ್‌ ನಟರನ್ನು ಬಂಧಿಸುವಂತೆ ಆಗ್ರಹಿಸಿದರು. ಇದರ ಬೆನ್ನಲ್ಲಿಯೇ ರಾಜ್ಯಸಭಾ ಸದಸ್ಯ ಹಾಗೂ ನಟ ಜಗ್ಗೇಶ್, ನಟ ದರ್ಶನ್‌ ತೂಗುದೀಪ, ನಿಖಿಲ್‌ ಕುಮಾರಸ್ವಾಮಿ ಹಾಗೂ ನಿರ್ಮಾಪಕ ರಾಕ್‌ಲೈನ್‌ ವೆಂಕಟೇಶ್‌ ಮನೆ ಮೇಲೆ ದಾಳಿ ಮಾಡಲಾಗಿತ್ತು. ಈ ವೇಳೆ ವಿಚಾರಣೆಗೆ ಹಾಜರಾಗುವಂತೆ ರಾಜ್ಯಸಭಾ ಸದಸ್ಯ ಜಗ್ಗೇಶ್‌ ಮನೆಗೆ ನೋಟಿಸ್‌ ಕೂಡ ನೀಡಲಾಗಿತ್ತು.

ಅರಣ್ಯಾಧಿಕಾರಿಗಳ ತಂಡದಿಂದ ನಟ ಜಗ್ಗೇಶ್‌ ಮನೆ ಮೇಲೆ ದಾಳಿ ಮಾಡಿ ಹುಲಿ ಉಗುರಿನ ಪೆಂಡೆಂಟ್‌ ವಶಕ್ಕೆ ಪಡೆದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ನೀಡಲಾಗಿತ್ತು. ಇದರ ಬೆನ್ನಲ್ಲೇ ಹೈಕೋರ್ಟ್ ಮೆಟ್ಟಿಲೇರಿದ ನಟ ಜಗ್ಗೇಶ್ ಅವರು, ಅರಣ್ಯಾಧಿಕಾರಿಗಳ ಕ್ರಮ ಪ್ರಶ್ನಿಸಿದ್ದರು. ಜೊತೆಗೆ, ಅರಣ್ಯಾಧಿಕಾರಿಗಳ ಕ್ರಮ ಕಾನೂನು ಬಾಹಿರವೆಂದು ಘೋಷಣೆ ಮಾಡಿ, ತಮಗೆ ನೀಡಿದ ಅರಣ್ಯ ಇಲಾಖೆಯ ನೋಟಿಸ್ ರದ್ದುಪಡಿಸುವಂತೆ ಹೈಕೋರ್ಟ್‌ಗೆ ಮನವಿ ಮಾಡಿದ್ದರು.

 

 

 

 

 

 

 

 

Leave a Reply

Your email address will not be published. Required fields are marked *