ಕಾರ್ಕಳ: ಸೋಮವಾರ ಸಂಜೆ ಸುರಿದ ಭಾರೀ ಗಾಳಿಮಳೆಗೆ ಕಾರ್ಕಳ ತಾಲೂಕಿನ ಎಳ್ಳಾರೆ ಗ್ರಾಮದ ಲಕ್ಷಿö್ಮÃ ಜನಾರ್ಧನ ಅನುದಾನಿತ ಪ್ರಾಥಮಿಕ ಶಾಲೆಯ ಮೇಲ್ಛಾವಣಿಯ ಹೆಂಚು ಬಿದ್ದು ತರಗತಿಯಲ್ಲಿದ್ದ 8 ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.
ಸೋಮವಾರ ಎಂದಿನAತೆ ಶಾಲೆಗೆ ಬಂದಿದ್ದ ವಿದ್ಯಾರ್ಥಿಗಳು ಇನ್ನೇನು ತರಗತಿ ಮುಗಿಸಿ ಮನೆಗೆ ಹೋಗಬೇಕು ಎನ್ನುವಷ್ಟರಲ್ಲಿ ಸಂಜೆ 4 ಗಂಟೆ ಸುಮಾರಿ ಸುರಿದ ಭಾರೀ ಗಾಳಿಸಹಿತ ಮಳೆಗೆ ಶಾಲೆಯ ಛಾವಣಿಯ ಹೆಂಚುಗಳು ಹಾರಿ ಹೋಗಿದ್ದು, ಕೆಲವು ಹೆಂಚುಗಳ ಚೂರುಗಳು ತರಗತಿ ಕೋಣೆಯೊಳಗೆ ಬಿದ್ದ ಪರಿಣಾಮ ತರಗತಿಯಲ್ಲಿದ್ದ ವಿದ್ಯಾರ್ಥಿಗಳಿಗೆ ಗಾಯಗಳಾಗಿವೆ. ಆದರೆ ಅದೃಷ್ಟವಶಾತ್ ಸ್ಥಳೀಯ ಲಕ್ಷಿö್ಮÃಜನಾರ್ಧನ ದೇವರ ಕೃಪೆಯಿಂದ ಯಾವುದೇ ದುರ್ಘಟನೆ ಸಂಭವಿಸಿಲ್ಲ. 8 ಜನರ ಪೈಕಿ ಕೇವಲ ಇಬ್ಬರು ಮಕ್ಕಳಿಗೆ ಆಸ್ಪತ್ರೆಗೆ ದಾಖಲಿಸಲಾಗಿದ್ದು ಅವರು ಚಿಕಿತ್ಸೆ ಪಡೆದುಕೊಂಡು ಮನೆಗೆ ಮರಳಿದ್ದಾರೆ.
ಘಟನಾ ಸ್ಥಳಕ್ಕೆ ಕಾರ್ಕಳ ತಾಲೂಕು ತಹಶೀಲ್ದಾರ್ ಅನಂತಶAಕರ, ಶಿಕ್ಷಣಾಧಿಕಾರಿ ಭಾಸ್ಕರ,ಟಿ, ಕಂದಾಯ ನಿರೀಕ್ಷಕ ರಿಯಾಜ್ ಅಹಮ್ಮದ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಗಾಯಗೊಂಡ ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿದ್ದಾರೆ