ಉಡುಪಿ: ಜಿಲ್ಲಾ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಕರ್ನಾಟಕ ರಾಜ್ಯೋತ್ಸವದಲ್ಲಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ರಾಷ್ಟ್ರ ಧ್ವಜಾರೋಹಣ ನಡೆಸಿದರು.
ಇದಕ್ಕೂ ಮೊದಲು ಉಡುಪಿಯ ಬೋರ್ಡ್ ಹೈಸ್ಕೂಲ್ ಬಳಿ ಕನ್ನಡಾಂಬೆಯ ಪ್ರತಿಮೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪುಷ್ಪನಮನ ಸಲ್ಲಿಸಿ ಮೆರವಣಿಗೆಗೆ ಚಾಲನೆ ನೀಡಿದರು.
ಜಿಲ್ಲಾ ಕ್ರೀಡಾಂಗಣದವರೆಗೆ ಕನ್ನಡಾಂಬೆಯ ಸ್ತಬ್ಧಚಿತ್ರ ಮೆರವಣಿಗೆ ನಡೆಯಿತು.
ನಗರಸಭೆ, ಪ್ರವಾಸೋದ್ಯಮ ಇಲಾಖೆ, ಕೃಷಿ ಇಲಾಖೆ, ಅರಣ್ಯ ಇಲಾಖೆಯಿಂದ ಸರ್ಕಾರದ ಕಾರ್ಯಕ್ರಮಗಳ ಬಗ್ಗೆ ಜಾಗೃತಿ ಮೂಡಿಸುವ ಸ್ತಬ್ಧಚಿತ್ರಗಳು ಮೆರವಣಿಗೆಯಲ್ಲಿ ಭಾಗವಹಿಸಿದ್ದವು.
ಸಮಾರಂಭದಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರನ್ನು ಉಸ್ತುವಾರಿ ಸಚಿವೆ ಹೆಬ್ಬಾಳ್ಕರ್ ಗೌರವಿಸಿದರು.