ಬೆಂಗಳೂರು:ನ್ಯಾಯಾಲಯದಲ್ಲಿ ಪ್ರಕರಣಗಳು ಬಾಕಿ ಇದ್ದ ಕಾರಣಕ್ಕೆ ತಡೆ ಹಿಡಿಯಲಾಗಿದ್ದ ‘371 ಜೆ’ಗೆ (ಹೈ-ಕ ವಿಶೇಷ ಸ್ಥಾನಮಾನ) ಸಂಬಂಧಿಸಿದ ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳು ಮತ್ತು ಬಿಬಿಎಂಪಿ ವ್ಯಾಪ್ತಿಯ ಶೇ.8 ರಷ್ಟು ಹುದ್ದೆಗಳಿಗೆ ಸಂಬಂಧಿಸಿದಂತೆ ಬೆಂಗಳೂರು ದಕ್ಷಿಣ ಮತ್ತು ಉತ್ತರ ಶೈಕ್ಷಣಿಕ ಜಿಲ್ಲೆಗಳಲ್ಲಿ 6ರಿಂದ 8ನೇ ತರಗತಿಯ ಪದವೀಧರ ಶಿಕ್ಷಕರ ಹುದ್ದೆಗಳಿಗೆ ನ.4ರಿಂದ ಕೌನ್ಸೆಲಿಂಗ್ ನಡೆಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ತಿಳಿಸಿದೆ.
ನ್ಯಾಯಾಲಯದ ಆದೇಶದಿಂದ ಪ್ರಭಾವಿತವಾಗಬಹುದಾದ ಹುದ್ದೆಗಳನ್ನು ಕಾಯ್ದಿರಿಸಿ ಉಳಿದ ಅಭ್ಯರ್ಥಿಗಳಿಗೆ ಕೌನ್ಸೆಲಿಂಗ್ ಮುಂದುವರೆಸಲಾಗುವುದು. ಈ ನಿಟ್ಟಿನಲ್ಲಿ 371 ಜೆ ಹುದ್ದೆಗಳಿರುವ (ಶೇ.80 ಸ್ಥಳೀಯ, ಶೇ.20 ಮಿಕ್ಕುಳಿದ ವೃಂದದ ಹುದ್ದೆಗಳು) ಬೀದರ್, ಕಲಬುರಗಿ, ರಾಯಚೂರು, ಕೊಪ್ಪಳ, ಯಾದಗಿರಿ, ಬಳ್ಳಾರಿ, ವಿಜಯನಗರ, ಬೆಂಗಳೂರು ಉತ್ತರ ಮತ್ತು ದಕ್ಷಿಣ ಶೈಕ್ಷಣಿಕ ಜಿಲ್ಲೆಗಳಿಗೆ (ಶೇ.8ರಷ್ಟು ರಾಜ್ಯಮಟ್ಟದ ಸ್ಥಳೀಯ ವೃಂದದ ಹುದ್ದೆಗಳು) ಸಂಬಂಧಿಸಿದಂತೆ ಕಳೆದ ಮಾರ್ಚ್‌ನಲ್ಲಿ ಪ್ರಕಟಿಸಿರುವ 1:1ರ ಅನುಪಾತದ ಮುಖ್ಯ ಆಯ್ಕೆ ಪಟ್ಟಿಯಲ್ಲಿ ಕೌನ್ಸೆಲಿಂಗ್‌ಗೆ ಅರ್ಹ ಅಭ್ಯರ್ಥಿಗಳ ವಿವರಗಳನ್ನು ಇಲಾಖೆಯ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುತ್ತಿದೆ ಎಂದು ಇಲಾಖೆ ಹೇಳಿದೆ.